ಆನೆಗೊಳ ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ

IMG-20240412-WA0157
Published on

ಕೆ.ಆರ್.ಪೇಟೆ: ತಾಲೂಕಿನ ಗಡಿಭಾಗ ಆನೆಗೊಳ ಚೆಕ್‌ಪೋಸ್ಟ್‌ಗೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ನೇತೃತ್ವದ ತಂಡ ದಾಖಲೆಗಳ ಪರಿಶೀಲನೆ ನಡೆಸಿತು.


ವಾಹನಗಳನ್ನು ತಪಾಸಣೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಚೆಕ್‌ಪೋಸ್ಟ್ ಮುಖಾಂತರ ಹಾದುಹೋಗುವ ಎಲ್ಲ ವಾಹನಗಳನ್ನೂ ಕಡ್ಡಾಯವಾಗಿ ತಪಾಸಣೆ ಮಾಡಲೇಬೇಕು ಎಂದು ಸೂಚಿಸಿದರು.


ಯಾವುದೇ ರೀತಿಯ ಅಕ್ರಮ ನಡೆಯದಂತೆ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಚುರುಕುಗೊಳಿಸಲಾಗಿದೆ. ಬಳಿಕ ಪಟ್ಟಣದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇವಿಎಂ ಯಂತ್ರಗಳನ್ನು ಸಂಗ್ರಹಿಸಿರುವ ಸ್ಟ್ರಾಂಗ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net