

ನಾಪೋಕ್ಲು: ಕಕ್ಕಬ್ಬೆ ಮಹಿಳಾ ಸಮಾಜದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಕ್ಕಬ್ಬೆ ಕಾರ್ಯಕ್ಷೇತ್ರದ ಸ್ಫೂರ್ತಿ ಜ್ಞಾನ ವಿಕಾಸ ಕೇಂದ್ರದ ಸಭೆ ಸೋಮವಾರ ನಡೆಯಿತು.
ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯ ಅರುಣ್ ಬೇಬ, ವಿಕಾಸ ಕೇಂದ್ರ ಸದಸ್ಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಗಳನ್ನು ನೀಡುವುದರ ಜತೆಗೆ ಅನಿಸಿಕೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸದಸ್ಯರಿಗೆ ಕೆಲವು ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಶುಭ ಹಾರೈಸಲಾಯಿತು. ಸಭೆಯಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಮಾಲಿನಿ, ಸೇವಾಪ್ರತಿನಿಧಿ ಹಾಗೂ ಸಂಘಗಳ ಸದಸ್ಯರು ಹಾಜರಿದ್ದರು.