ಎಚ್‌ಕೆಎಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಫೂರ್ತಿ ಮಾತು

ಎಚ್‌ಕೆಎಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಫೂರ್ತಿ ಮಾತು
Published on

ಹಾಸನ: ನಗರದ ಎಚ್.ಕೆ.ಎಸ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಶುಕ್ರವಾರ ಸ್ಫೂರ್ತಿ ಮಾತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪಶ್ಚಿಮ ಬಂಗಾಳದ ಶಿಕ್ಷಣ ತಜ್ಞ, ಆನಂದ್ ಶಿಕ್ಷಾನಿಕೇತನ ಸಂಸ್ಥೆಯ ಸ್ಥಾಪಕ ಬಾಬರ್ ಅಲಿ ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶ ಗುಣವನ್ನು ಇಟ್ಟುಕೊಂಡು, ತಾವು ಬೆಳೆದು ಬಂದ ಮಾರ್ಗವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಶಿಕ್ಷಣದ ಬಗ್ಗೆ ಇದ್ದ ಒಲವು, ಶೈಕ್ಷಣಿಕ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಬಗ್ಗೆ ಹಾಗೂ ಶಿಕ್ಷಣದ ಮಹತ್ವವನ್ನು ವಿವರಿಸಿದರು. ರಾಮಕೃಷ್ಣ ಮಿಷನ್ ಸಂಸ್ಥೆಯ ಪ್ರೇರಣೆಯೊಂದಿಗೆ ಒಂಬತ್ತು ಸಾವಿರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದೇವೆ ಎಂದರು.

ಪ್ರಾಂಶುಪಾಲ ಎ.ಪ್ರವೀಣ್, ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಜಿ.ವಿಮಲ್ ರಾಜ್, ಬಿ.ಆರ್. ಚಿಂತನ್, ಎಚ್.ವಿ.ವಿಕಾಸ್ ಜೆ.ಎನ್.ಶ್ರೀನಿವಾಸ್, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net