ಹಿಂಗಣಿ ಶಾಲೆ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

CDN 18-1
Published on

ಚಡಚಣ: ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠದಲ್ಲಿ ೆ. 15ರಂದು ಆಯೋಜಿಸಲಾಗಿದ್ದ 2019-20ನೇ ಸಾಲಿನ ರಾಜ್ಯಮಟ್ಟದ ಇನ್ಸ್‌ಫೈಯರ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಚಡಚಣ ತಾಲೂಕಿನ ಹಿಂಗಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಅಭಿಜಿತ್ ಬಿರಾದಾರ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಶಾಲೆಯ ವಿಜ್ಞಾನ ಶಿಕ್ಷಕ ಶಂಕರಗೌಡ ಬಿರಾದಾರ ಅವರ ಮಾರ್ಗದರ್ಶನದಲ್ಲಿ ಸಂಶೋಧಿಸಿ ತಯಾರಿಸಿದ ಬಹುಪಯೋಗಿ ಸೋಲಾರ ಕೀಟನಾಶಕ ಸಿಂಪಡಣಾ ಯಂತ್ರ ಪ್ರದರ್ಶಿಸಿ, ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾನೆ ಎಂದು ಶಾಲೆ ಮುಖ್ಯಗುರು ಆರ್.ಜೆ. ವಾಲಿಕಾರ ತಿಳಿಸಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಚಡಚಣ ಬಿಇಒ ಟಿ.ಎಸ್. ಆಲಗೂರ, ಶಾಲೆ ಸಿಬ್ಬಂದಿ, ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net