ವಾರ್ಡ್‌ಗೊಂದೇ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ

14MDG2 SABHE
Published on

ಮುಂಡರಗಿ: ಪಟ್ಟಣ ಸೇರಿ ತಾಲೂಕಿನಲ್ಲಿ ಅಹಿತಕರ ಘಟನೆ ಆಗದಂತೆ, ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಗಣೇಶ ಹಬ್ಬವನ್ನು ಅಚ್ಚುಕಟ್ಟಾಗಿ ಆಚರಿಸಬೇಕು ಎಂದು ಸಿಪಿಐ ಮಂಜುನಾಥ ಕುಸುಗಲ್ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗಣೇಶ ಚತುರ್ಥಿ ಹಬ್ಬದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.
ಅಹಿತಕರ ಘಟನೆ ತಡೆಯುವ ನಿಟ್ಟಿನಲ್ಲಿ ಸ್ಥಳೀಯ ಪ್ರಮುಖ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುತ್ತದೆ. ವಾರ್ಡ್‌ಗೆ ಒಂದೇ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಸಹೋದರತ್ವದಿಂದ ಹಬ್ಬ ಆಚರಿಸಬೇಕು. ಗಣೇಶ ಪ್ರತಿಷ್ಠಾಪನೆಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಸರ್ಕಾರದ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ತಿಳಿಸಿದರು.

ಪಿಎಸ್‌ಐ ಸುಮಾ ಗೊರಬಾಳ ಮಾತನಾಡಿ, ಸರ್ಕಾರದ ನಿಯಮಾನುಸಾರ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು. ಶಾಂತಿ, ಸುವ್ಯವಸ್ಥೆ ಹದಗೆಟ್ಟರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪುರಸಭೆ ಸದಸ್ಯ ನಾಗರಾಜ ಹೊಂಬಳಗಟ್ಟಿ, ಯಲ್ಲಪ್ಪ ಗಣಾಚಾರಿ, ಮಂಜುನಾಥ ಮುಧೋಳ, ಬಸವರಾಜ ನವಲಗುಂದ, ಅಡಿವೆಪ್ಪ ಚಲವಾದಿ, ಹಾಲಪ್ಪ ಅರಹುಣಸಿ, ಸುಲೆಮಾನ್ ಬೇವೂರ ಮಾತನಾಡಿದರು. ಗಣೇಶ ಹಾತಲಗೇರಿ, ಲಕ್ಷ್ಮಣ ತಗಡಿನಮನಿ, ಶ್ರೀನಿವಾಸ ಕೊರ್ಲಗಟ್ಟಿ, ಮನೋಜ ರಾಠೋಡ, ಪವನ ಲೇಡ್ವೆ, ಹೆಸ್ಕಾಂ ಎಇಇ ಚನ್ನಪ್ಪ ಲಮಾಣಿ, ಪುರಸಭೆ ಕಿರಿಯ ಆರೋಗ್ಯ ನಿರೀಕ್ಷಕ ಎಂ.ಎಸ್. ಮ್ಯಾಗೇರಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net