ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ

Kolhar, Police Station, Ganesh Chaturthi, Peace Meeting, PSI,
ಕೊಲ್ಹಾರ ಪೊಲೀಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಪಿಎಸ್‌ಐ ಎಂ.ಬಿ.ಬಿರಾದಾರ ಮಾತನಾಡಿದರು. ಅಧಿಕಾರಿಗಳಾದ ಉಮೇಶ ಚಲವಾದಿ, ಕೆ.ಎಂ.ಗುಡೂರ ಇದ್ದರು.
Published on

ಕೊಲ್ಹಾರ: ಪಟ್ಟಣದ ವಿವಿಧೆಡೆಗಳಲ್ಲಿ ಗಣೇಶ ಮೂರ್ತಿಗಳನ್ನು ಆಯಾ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡುವಲ್ಲಿ ಗಜಾನನ ಯುವಕ ಸಂಘದವರು ತಪ್ಪದೆ ಕಾನೂನು ನಿಯಮಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಎಂ.ಬಿ.ಬಿರಾದಾರ ಹೇಳಿದರು.

ಗಣೇಶೋತ್ಸವ ಹಬ್ಬದ ಪ್ರಯುಕ್ತ ಸ್ಥಳೀಯ ಪೊಲೀಸ್ ಠಾಣೆ ಆವರಣದಲ್ಲಿ ಗುರುವಾರ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಧ್ವನಿವರ್ಧಕ ಉಪಯೋಗಿಸಲು ಹೆಸ್ಕಾಂ ಇಲಾಖೆ, ಪೊಲೀಸ್ ಇಲಾಖೆ, ಪಟ್ಟಣ ಪಂಚಾಯಿತಿಯಿಂದ ನಿರಾಪೇಕ್ಷಣಾ ಪತ್ರ ಪಡೆಯುವುದು ಕಡ್ಡಯವಾಗಿದೆ. ಗಣೇಶ ಪ್ರತಿಷ್ಠಾನದ ಜಾಗದ ಸುತ್ತಮುತ್ತ ಕಾನೂನು ಬಾಹಿರ ಚಟುವಟಿಕೆಗೆ ಆಸ್ಪದ ನೀಡಬಾರದು. ಶಾಂತಿಯುತವಾಗಿ ಗಣೇಶ ಹಬ್ಬಗಳನ್ನು ಆಚರಣೆ ಮಾಡಬೇಕು. ಪಿಒಪಿ ಗಣೇಶ ಮೂರ್ತಿಗಳನ್ನು ಸರ್ಕಾರ ನಿಷೇಧಿಸಿದ್ದು, ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು. ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಗಣೇಶ ಉತ್ಸವ ಪದಾಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದರು.


ಸಭೆಯಲ್ಲಿ ಪಪಂ ಮುಖ್ಯಾಧಿಕಾರಿ ಉಮೇಶ ಚಲವಾದಿ, ಶಿರಸ್ತೇದಾರ ಕೆ.ಎಂ.ಗುಡೂರ, ಹೆಸ್ಕಾಂ ಅಧಿಕಾರಿ ಶ್ರೀಶೈಲ ಪಡಸಲಗಿ,ಪಪಂ ಸದಸ್ಯರಾದ ಚೆನಮಲ್ಲಪ್ಪ ಗಿಡ್ಡಪ್ಪಗೋಳ, ಬಾಬು ಭಜಂತ್ರಿ ಹಾಗೂ ಮುಖಂಡರಾದ ಮಂಜುನಾಥ ತುಂಬರಮಟ್ಟಿ, ಅಲ್ಲಾಭಕ್ಷ ಬಿಜಾಪುರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net