ಮೈಸೂರು ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ತಡೆಗೆ 50 ಕ್ಯಾಮರಾ ಅಳವಡಿಕೆ

trafic police
Published on

ಮೈಸೂರು: ಜಿಲ್ಲೆಯಲ್ಲಿ ರಸ್ತೆ ಅಪಘಾತ ಹಾಗೂ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ತಡೆಗೆ ಜಿಲ್ಲೆಯಲ್ಲಿ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಲೈ 1 ರಿಂದ ಕ್ಯಾಮರಾಗಳು ಕಣ್ಗಾವಲು ಇರಿಸಲಿವೆ.

ಜಿಲ್ಲೆಯಲ್ಲಿ ವಾರ್ಷಿಕ ಸರಾಸರಿ 450 ಜನರು ಮೃತಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲೆಯ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 50 ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಈ ಕ್ಯಾಮರಾಗಳು ಜುಲೈ 1 ರಿಂದ ಚಾಲನೆಗೊಳ್ಳಲಿದೆ.

ಸಂಚಾರ ನಿಯಮ ಉಲ್ಲಂಘಿಸಿದರೆ (ಹೆಲ್ಮೆಟ್ ಧರಿಸದೇ ಚಲಿಸುವುದು, ಟ್ರಿಪಲ್ ರೈಡಿಂಗ್, ಸೀಟ್ ಬೆಲ್ಟ್ ಧರಿಸದೆ ಇರುವುದು, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ) ಮಾಡುವವರ ವಿರುದ್ಧ ಪ್ರಕರಣಗಳು ದಾಖಲಿಸಿ ಪ್ರಕರಣ ದಾಖಲಾದ ಮಾಹಿತಿಯನ್ನು ತ ಕ್ಷಣವೇ ವಾಹನ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಕಳುಹಿಸಲಾಗುವುದು. ಅಲ್ಲದೆ, ವಾಹನ ಮಾಲೀಕರ ವಿಳಾಸಕ್ಕೆ ಚ ಲನ್ ರವಾನಿಸಲಾಗುವುದು. ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನದ ಮಾಲೀಕರು, ಚಾಲಕರು ಆನ್‌ಲೈನ್ ಮೂಲಕ ಅಥವಾ ಪೊಲೀಸ್ ಠಾಣೆಗೆ ತೆರಳಿ ದಂಡದ ಮೊತ್ತ ಪಾವತಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net