

ಬಾಳೆಹೊನ್ನೂರು: ಪಟ್ಟಣದ ವಿವಿಧೆಡೆ 36 ಬೀದಿ ದೀಪಗಳನ್ನು ಅಳವಡಿಸಲಾಗುವುದು ಎಂದು ಬಿ.ಕಣಬೂರು ಗ್ರಾಪಂ ಅಧ್ಯಕ್ಷ ಸದಾಶಿವ ಆಚಾರ್ಯ ತಿಳಿಸಿದರು.
ಪೊಲೀಸ್ ಠಾಣೆ ಎದುರು ಶನಿವಾರ ಬೀದಿ ದೀಪ ಅಳವಡಿಕೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಶಾಸಕ ಟಿ.ಡಿ.ರಾಜೇಗೌಡ ಅವರ ಮೂಲಕ ಲೋಕೋಪಯೋಗಿ ಇಲಾಖೆಯಿಂದ ಪಟ್ಟಣದಲ್ಲಿ 36 ಅತ್ಯಾಧುನಿಕ ಬೀದಿ ದೀಪಗಳನ್ನು ಅಳವಡಿಸಲು 50 ಲಕ್ಷ ರೂ. ಅನುದಾನ ಮಂಜೂರು ಮಾಡಿಸಲಾಗಿದೆ. ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಿಂದ ರೋಟರಿ ವೃತ್ತದವರೆಗೆ ಅವುಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್ ಮಾತನಾಡಿ, ಪಟ್ಟಣದಲ್ಲಿ ಈ ಹಿಂದೆಯೇ ರಸ್ತೆ ವಿಸ್ತರಣೆ ಸಂದರ್ಭದಲ್ಲಿ ಹೊಸ ಮಾದರಿಯ ಬೀದಿ ದೀಪಗಳನ್ನು ಅಳವಡಿಸಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಉದ್ದೇಶಿಸಿದ್ದರು. ಆದರೆ ಅದಕ್ಕೆ ಕಾಲ ಕೂಡಿ ಬಂದಿರಲಿಲ್ಲ. ಇದೀಗ ಅನುದಾನವೂ ಮಂಜೂರಾಗಿದ್ದು, ಅಗತ್ಯವಿದ್ದಲ್ಲಿ ಹೊಸ ಬೀದಿ ದೀಪಗಳನ್ನು ಅಳವಡಿಸಲಾಗುವುದು ಎಂದರು.
ಗ್ರಾಪಂ ಸದಸ್ಯರಾದ ಬಿ.ಕೆ.ಮಧುಸೂದನ್, ರವಿಚಂದ್ರ, ಬಿ.ಸಿ.ಸಂತೋಷ್‌ಕುಮಾರ್, ಮಹಮ್ಮದ್ ಜುಹೇಬ್, ಶಿವಪ್ಪ, ಪರ್ವಿನ್ ಇಮ್ತಿಯಾಜ್, ಗ್ರಾಪಂ ಮಾಜಿ ಅಧ್ಯಕ್ಷ ಜಾನ್ ಡಿಸೋಜಾ, ಗುತ್ತಿಗೆದಾರ ಶ್ರೀಕಂಠ, ಬಶೀರ್, ಎಚ್.ಎಂ.ಸಲೀಮ್, ಅಬೂಬಕರ್ ಸಿದ್ದಿಕ್, ಇಲಿಯಾಸ್ ಇತರರಿದ್ದರು.