

ಆಲೂರು: ಆಲೂರು ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಆನಂದ್ ಪಟ್ಟಣದ ವಿವಿಧ ಸ್ಥಳಗಳಲ್ಲಿ ಅಪಘಾತ ಎಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75ರ ಯಡಿಯೂರು ಕೂಡಿಗೆ, ಆಲೂರು ಪಟ್ಟಣದಿಂದ ಬೈರಾಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಕೆಲ ಭಾಗಗಳಲ್ಲಿ ಆಗಿಂದ್ದಾಗೆ ಅಪಘಾತಗಳು ಸಂಭವಿಸುತ್ತಿದ್ದವು. ಇದನ್ನು ನಿಯಂತ್ರಿಸುವ ಸಲುವಾಗಿ ರಾತ್ರಿ ಸಮಯದಲ್ಲಿ ಮಿನುಗುವ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಎಂದು ಆನಂದ್ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ 75ರ ಚೌಲ್ಗೆರೆ ಗ್ರಾಮದ ಬಳಿ ಟೋಲ್ ನಿರ್ಮಾಣವಾಗಿರುವುದರಿಂದ ಸುಂಕ ಪಾವತಿಯಿಂದ ತಪ್ಪಿಸಿಕೊಳ್ಳಲು ಹೆಚ್ಚಿನ ವಾಹನಗಳು ಆಲೂರು ಪಟ್ಟಣದೊಳಗೆ ಬರುತ್ತಿವೆ. ಇದು ವಾಹನ ದಟ್ಟಣೆ ಹಾಗೂ ಅಪಘಾತ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ.