ಜಾತ್ರಾ ಸ್ಥಳಕ್ಕೆ ಆರೋಗ್ಯ ಇಲಾಖೆ ದಿಢೀರ್ ಭೇಟಿ

10 SARAG 1
ಸರಗೂರು ತಾಲೂಕಿನ ಭೀಮಾನಕೊಲ್ಲಿ ಮಹದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ದಾಸೋಹ ಮನೆಗೆ ಸೋಮವಾರ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Published on

ಸರಗೂರು: ತಾಲೂಕಿನ ಎನ್.ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಭೀಮನಕೊಲ್ಲಿಯಲ್ಲಿ ಸೋಮವಾರದಿಂದ ಆರಂಭವಾಗಿರುವ ಮೂರು ದಿನಗಳ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವದಲ್ಲಿ ತಾತ್ಕಾಲಿಕ ಆಸ್ಪತ್ರೆ, ದಾಸೋಹ ಭವನಕ್ಕೆ ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ ಮತ್ತು ಸಿಬ್ಬಂದಿ ಭೇಟಿ ನೀಡಿ ಸಾಂಕ್ರಾಮಿಕ ರೋಗಗಳು ಹರಡದಂತೆ ತೆಗೆದುಕೂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲಿಸಿದರು.

ಮೇಲ್ವಿಚಾರಣೆ ಮಾಡಿ, ತಿಂಡಿ-ತಿನಿಸುಗಳನ್ನು ಮಾರಾಟ ಮಾರುವವರು ಶುದ್ಧವಾದ ತಿಂಡಿಗಳನ್ನು ಮಾರಾಟ ಮಾಡಬೇಕು. ಹಣ್ಣುಗಳನ್ನು ಕೂದ್ದು ಮಾರಾಟ ಮಾಡುವವರು, ಧೂಳು, ಕಸ ಬೀಳದಂತೆ ಮುಚ್ಚಿ ಮಾರಾಟ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

ಹಣ್ಣುಗಳ ಮೇಲೆ ನೊಣಗಳು ಮತ್ತು ಕೀಟಗಳು ಕೂರದಂತೆ ನೋಡಿಕೊಳ್ಳಬೇಕು. ದಾಸೋಹ ಭವನಕ್ಕೆ ಭೇಟಿ ನೀಡಿ ಭಕ್ತಾದಿಗಳಿಗೆ ಶುದ್ಧವಾದ ಆಹಾರವನ್ನು ನೀಡಬೇಕು. ಅಡುಗೆ ಮಾಡುವಾಗ ಪಾತ್ರೆಗಳನ್ನು ಶುದ್ಧವಾಗಿ ತೊಳೆದುಕೊಳ್ಳಬೇಕು. ಸೊಪ್ಪು-ತರಕಾರಿಗಳನ್ನು ಶುದ್ಧವಾದ ನೀರಿನಿಂದ ತೊಳೆಯಬೇಕು. ಅಡುಗೆಯನ್ನು ಶುದ್ಧವಾದ ನೀರಿನಿಂದ ತಯಾರು ಮಾಡಬೇಕು. ಅಡುಗೆ ತಯಾರಾದ ನಂತರ ಮುಚ್ಚಿಡಬೇಕು ಎಂದು ಸಿಬ್ಬಂದಿ ಸೂಚಿಸಿದರು.

ಜಾತ್ರೆಗೆ ಬರುವ ಭಕ್ತಾದಿಗಳಿಗೆ ತುರ್ತು ವಾಹನ ಸೌಲಭ್ಯವನ್ನು ಒದಗಿಸಲಾಗಿದೆ. ನೀಡುವ ಪ್ರಸಾದವನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ. ಕುಡಿಯುವ ನೀರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ದೇವಸ್ಥಾನದ ಸುತ್ತಮುತ್ತ ಹಾಗೂ ದಾಸೋಹ ಭವನದ ಸುತ್ತಮುತ್ತ ಬ್ಲೀಚಿಂಗ್ ಪೌಡರ್ ಹಾಕಿಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸೋಮಣ್ಣ, ರೇಷ್ಮೆ ಇಲಾಖೆ ಸಹ ನಿರ್ದೇಶಕ ಉಮೇಶ್, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ ನಾಗೇಂದ್ರ, ರವಿರಾಜ್, ಪ್ರದೀಪ್, ಶಿವಕುಮಾರಿ, ಜಾತ್ರಾ ಮಹೋತ್ಸವ ಟ್ರಸ್ಟ್ ಅಧ್ಯಕ್ಷ ಮೂರ್ತಿ, ಕಾರ್ಯದರ್ಶಿ ಜಗದೀಶ್, ಪದಾಧಿಕಾರಿಗಳಾದ ಶಿವರಾಜಪ್ಪ ,ದಯಾನಂದ್.ಗುರು ಮೂರ್ತಿ, ಕಾನ್ಸ್ಟೇಬಲ್ ಸುರೇಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net