ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

h13=tenginakai
Published on

ಹುಬ್ಬಳ್ಳಿ: ಇಲ್ಲಿನ ವಾರ್ಡ್ ನಂ. 54ರ ಗಣೇಶ ನಗರದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಮಹೇಶ ಟೆಂಗಿನಕಾಯಿ ಭಾನುವಾರ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು. ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ವಾರ್ಡ್ ಅಧ್ಯಕ್ಷ ಮೋಹನ ಬರೋಡೆ, ಪಾಲಿಕೆ ಮಾಜಿ ಸದಸ್ಯ ಲಕ್ಷ್ಮಣ ಕಲಾಲ, ಎ.ಜಿ. ದೇಶಪಾಂಡೆ, ಮಂಜುನಾಥ ಬ್ಯಾಡಗಿ, ಗುರು ವೀರಾಪುರ, ಗುತ್ತಿಗೆದಾರ ಅರವಿಂದ ಚವ್ಹಾಣ, ಬಿಜೆಪಿ ವಕ್ತಾರ ರವಿ ನಾಯಕ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net