

ಬಾಗಲಕೋಟೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶೈಣಿಕ ಹಿತದೃಷ್ಟಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲಾಗುತ್ತಿದೆ.
ಈ ಸಂಬಂಧ 2025&26ನೇ ಸಾಲಿನಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ನಲ್ಲಿ ಒನ್ ಟೈಂ ರಜಿಸ್ಟ್ರೆಶನ್ ಸಂಖ್ಯೆಯನ್ನು ಕ್ರಿಯೆಟ್ ಮಾಡಿ ತದನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್&1) ಸಮಾಜ ಕಲ್ಯಾಣ ಇಲಾಖೆಯ ಬಾಗಲಕೋಟೆ ಕಚೇರಿ ಅಥವಾ ದೂರವಾಣಿ ಸಂಖ್ಯೆ 08354&221821 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.