

ರಾಯಚೂರು ಜಿ¯್ಲÁಡಳಿತದಿಂದ ಏ.೧೦ರಂದು ಭಗವಾನ್ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಅಪರ ಜಿ¯್ಲÁಽಕಾರಿ ಶಿವಾನಂದ ಅವರು ಸಂಬAಽಸಿದ ಅಽಕಾರಿಗಳಿಗೆ ಸೂಚಿಸಿದರು.
ನಗರದ ಜಿ¯್ಲÁಽಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಭಗವಾನ್ ಮಹಾವೀರ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂದು ಜಯಂತಿ ದಿನ ಬೆಳಿಗ್ಗೆ ೯ ಗಂಟೆಗೆ ನಗರದ ಮಹಾವೀರ್ ಸರ್ಕಲ್‌ನಿಂದ ಭಗವಾನ್ ಮಹಾವೀರರ ಭಾವಚಿತ್ರ ಮೆರವಣಿಗೆ ನಡೆಸಲಾಗುತ್ತಿದ್ದು, ಮೆರವಣಿಗೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು.
ಮೆರವಣಿಗೆಗೆ ವಿವಿಧ ಜÁನಪದ ಕಲಾತಂಡಗಳನ್ನು ಆಹ್ವಾನಿಸಬೇಕು. ಬೆಳಿಗ್ಗೆ ೧೧ ಗಂಟೆಗೆ ನಗರದ ಜೈನ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಭಗವಾನï ಮಹಾವೀರ ಕುರಿತು ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ಆಹ್ವಾನಿಸಬೇಕೆಂದು ಸಂಬಅಽಸಿದ ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಿಸಬೇಕು. ವೇದಿಕೆ ನಿರ್ಮಾಣ ಸೇರಿದಂತೆ ಇತರೆ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಬೇಕು. ವಿವಿಧ ಇಲಾಖೆಯ ಅಽಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಿರಬೇಕು. ಅಲ್ಲದೆ ಉತ್ತಮವಾಗಿ ಸೇವೆ ಸಲ್ಲಿಸಿದ ಸಾಧಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗೂರು, ರಾಯಚೂರು ಮಹಾನಗರ ಪಾಲಿಕೆಯ ಕೃಷ್ಣ ಕಟ್ಟಿಮನಿ ಸೇರಿದಂತೆ ಅನೇಕರು ಇದ್ದರು.