ಆಂತರಿಕ ದೂರು ಸಮಿತಿ ರಚಿಸಲು ಸೂಚನೆ

Deadline for purchasing FAQ sunflowers
Published on

ವಿಜಯಪುರ : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) ಕಾಯ್ದೆಯ ಅನುಷ್ಠಾನಗೊಳಿಸಿ, ಸೆಕ್ಷನ್​ 4 ರಂತೆ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿದೆ. ಸವೋರ್ಚ್ಛ ನ್ಯಾಯಾಲಯದ ನಿರ್ದೇಶನದಂತೆ 10 ಅಥವಾ 10 ಕ್ಕಿಂತ ಅಧಿಕ ಕಾರ್ಮಿಕರನ್ನು ಹೊಂದಿರುವ ಎಲ್ಲ ವಾಣಿಜ್ಯ ಸಂಸ್ಥೆ, ಉದ್ದಿಮೆಗಳು, ಕಾರ್ಖಾನೆಗಳ ಪ್ರತಿ ಸಂಸ್ಥೆ ಮಾಲೀಕರು ತಮ್ಮ ಸಂಸ್ಥೆಯಲ್ಲಿ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿದೆ. ಆಂತರಿಕ ದೂರು ಸಮಿತಿಯನ್ನು ರಚಿಸಿದ ಹಾಗೂ ರಚಿಸದೇ ಇರುವ ಸಂಸ್ಥೆಗಳು ಕೂಡಲೇ ಆಂತರಿಕ ದೂರು ಸಮಿತಿ ರಚನೆ ಮಾಡಿದ ಕುರಿತ ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಹಾಗೂ ವಿಜಯಪುರದ ಕಾರ್ಮಿಕ ಇಲಾಖೆ ಕಚೇರಿಗೆ ಕೂಡಲೇ ಸಲ್ಲಿಸಬೇಕೆಂದು ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net