ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

BHOOMI POOJA
Published on

ಸಿದ್ದಾಪುರ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರವಿಂದ್ರ ನಗರದ ಕೋರ್ಟ್ ಹಿಂಬಾಗದ ಪ್ರದೇಶಗಳಿಗೆ ತೆರಳುವ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಪಪಂನ ಏಳು ವಾರ್ಡಿನ ವಿವಿಧ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸುಮಾರು ಎರಡು ಕೋಟಿ ರೂಗಳ ಕಾಮಗಾರಿ ಇದಾಗಿದೆ. ಪಟ್ಟಣದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ. ಪಪಂ ವ್ಯಾಪ್ತಿಯಲ್ಲಿ ಎಲ್ಲಿಯೂ ಕಚ್ಚಾ ರಸ್ತೆ ಇರಬಾರದು. ಎಲ್ಲವೂ ಸುಧಾರಣೆ ಆಗಬೇಕು. ಕಾಮಗಾರಿಯನ್ನು ಗುತ್ತಿಗೆದಾರರು ಉತ್ತಮ ಗುಣಮಟ್ಟದಿಂದ ಮಾಡಬೇಕೆಂದು ಎಚ್ಚರಿಕೆ ನೀಡಿದರು.

ಪಪಂ ಅಧ್ಯಕ್ಷೆ ಚಂದ್ರಕಲಾ ಸುರೇಶ ನಾಯ್ಕ, ಉಪಾಧ್ಯಕ್ಷ ವಿನಯ ಹೊನ್ನೆಗುಂಡಿ, ಕೆ.ಜಿ.ನಾಯ್ಕ ಹಣಜೀಬೈಲ್, ನಂದನ ಬೋರ್ಕರ್, ಕವಿತಾ ಹೆಗಡೆ, ವಿಜೇಂದ್ರ ಗೌಡರ್, ಮುಖ್ಯಾಧಿಕಾರಿ ಜೆ.ಆರ್.ನಾಯ್ಕ, ಅಭಿಯಂತರ ರಮೇಶ ನಾಯ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net