ಜಾತ್ರೆಗೆ ಅಗತ್ಯ ಸೌಕರ್ಯ ಕಲ್ಪಿಸಲು ಸೂಚನೆ

sdp jatre
Published on

ಸಿದ್ದಾಪುರ: ತಾಲೂಕಿನ ಅವರಗುಪ್ಪದಲ್ಲಿ ಮಂಗಳವಾರದಿಂದ ಏ.8ರವರೆಗೆ ಜರುಗುವ ಮಾರಿಕಾಂಬಾ ದೇವಿ ಜಾತ್ರೆಯ ಸಿದ್ಧತೆ ಕುರಿತು ಶಾಸಕ ಭೀಮಣ್ಣ ಪರಿಶೀಲಿಸಿ ಕುಡಿಯುವ ನೀರು, ವಿದ್ಯುತ್ ಹಾಗೂ ಸೂಕ್ತ ಭದ್ರತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳು ಹಾಗೂ ಜಾತ್ರಾ ಕಮಿಟಿಯವರೊಂದಿಗೆ ಸಮಾಲೋಚನೆ ನಡೆಸಿದರು. ವಿದ್ಯುತ್ ಸಮರ್ಪಕವಾಗಿ ಪೂರೈಸಬೇಕು ಹಾಗೂ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಸಂಬಂಧಪಟ್ಟ ಗ್ರಾಪಂ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡಬೇಕು. ಜತೆಗೆ ಬೀದಿದೀಪಗಳ ನಿರ್ವಹಣೆ ಸರಿಯಾಗಿ ಮಾಡಬೇಕು. ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಒದಗಿಸಬೇಕು ಎಂದು ಸಿಪಿಐ ಸೀತಾರಾಮ ಅವರಿಗೆ ಸೂಚಿಸಿದರು. ಸ್ವಚ್ಛತೆ ಕುರಿತು ಹೆಚ್ಚು ಗಮನ ನೀಡಬೇಕೆಂದು ಜಾತ್ರಾ ಕಮಿಟಿಯವರಿಗೆ ತಿಳಿಸಿದರು.

ಕೋಲಸಿರ್ಸಿ ಗ್ರಾಪಂ ಅಧ್ಯಕ್ಷೆ ಸುಮನಾ ನಾಯ್ಕ, ತಹಸೀಲ್ದಾರ್ ಎಂ.ಆರ್.ಕುಲಕರ್ಣಿ, ಜಾತ್ರಾ ಸಮಿತಿ ಅಧ್ಯಕ್ಷ ರಾಜು ಗೊಂಡ, ಕಾರ್ಯದರ್ಶಿ ಪ್ರಶಾಂತ ನಾಯ್ಕ, ಬಾಲಕೃಷ್ಣ ನಾಯ್ಕ ಕೋಲಸಿರ್ಸಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ತಿಲಕಕುಮಾರ ನಾಯ್ಕ, ಎಸ್.ಕೆ. ಭಾಗ್ವತ್, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net