ಬಂಟ್ಸ್-ಬಿಲ್ಲವರ ವಿರುದ್ಧ ಅವಹೇಳನ ಅನಿತಾ ಕಾಸರಗೋಡು ಬಂಧನ

ಅನಿತಾ ಕಾಸರಗೋಡು
ಅನಿತಾ ಕಾಸರಗೋಡು
Published on
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಂಟ್ಸ್ ಹಾಗೂ ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಸಂದೇಶ ಹಾಕಿರುವ ಅನಿತಾ ಕಾಸರಗೋಡು ಎಂಬಾಕೆಯನ್ನು ಬರ್ಕೆ ಪೊಲೀಸರು ಬಂಧಿಸಿದ್ದು, ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅನಿತಾ ಕಾಸರಗೋಡು ಹಲವು ದಿನಗಳಿಂದ ಬಂಟ್ಸ್ ಮತ್ತು ಬಿಲ್ಲವರ ಬಗ್ಗೆ ಕೀಳಾಗಿ ಮಾತನಾಡಿ, ಸವಾಲು ಕೂಡಾ ಹಾಕಿದ್ದಾರೆ. ಮಹಿಳೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಆಕೆಯ ವಿರುದ್ಧ ಬಿರುವೆರ್ ಕುಡ್ಲ ಸಂಘಟನೆಯ ರಾಕೇಶ್ ಪೂಜಾರಿ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್‌ಗಳ ಪರಿಶೀಲನೆ ನಡೆಸಿ, ತಾಂತ್ರಿಕ ಮಾಹಿತಿ ಸಂಗ್ರಹಿಸಿ ಪೊಲೀಸರು ಆಕೆಯನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಬಂಧನ: ಅನಿತಾ ಕಾಸರಗೋಡು ಬೆಂಗಳೂರಿಗೆ ತೆರಳಿ ಅಕ್ಕನ ಮನೆಯಲ್ಲಿದ್ದರು. ಪೊಲೀಸರು ಮೊಬೈಲ್ ಟ್ರಾೃಕ್ ಮೂಲಕ ಆಕೆಯನ್ನು ಪತ್ತೆಹಚ್ಚಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆಕೆಯನ್ನು ಮಂಗಳೂರಿಗೆ ಕರೆತರಲಾಗಿದ್ದು, ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net