ದೆಹಲಿಯಲ್ಲಿ ನಡೆದ ಕನ್ನಡ ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷರಿಗೇ ಅವಮಾನ: ಬೇಸರಗೊಂಡು ಹೊರ ಬಂದ ಜೋಶಿ

Kannada Sahithya Parishath Mahesh Joshi
Published on

ಬೆಂಗಳೂರು: ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯನ್ನಾಗಿ ನನ್ನನ್ನು ಆಹ್ವಾನಿಸಿ, ವೇದಿಕೆಯಲ್ಲಿ ಸ್ಥಾನ ನೀಡದೆ ಅವಮಾನ ಮಾಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ನನಗೆ ಮಾಡಿದ ಅವಮಾನವಲ್ಲ, ಕನ್ನಡದ ಪ್ರಾತಿನಿಧಿಕ ಸಂಸ್ಥೆಗೆ ಮಾಡಿದ ಅಪಮಾನ. ಇದರಿಂದ ಬೇಸರಗೊಂಡು ಕಾರ್ಯಕ್ರಮದಲ್ಲಿ ಭಾಗವಹಿಸದೆ ಹೊರ ನಡೆದಿದ್ದಾಗಿ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮ ಆಗಿದ್ದರಿಂದ, ಮೊದಲೇ ಪ್ರಧಾನ ಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಬೇಕಿತ್ತು. ಆದರೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಘನತೆ-ಗೌರವ ತಿಳಿಸುವುದರಲ್ಲಿ ಹಾಗೂ ತಮ್ಮ ಉಪಸ್ಥಿತಿಯ ಅನಿವಾರ್ಯತೆ ವೇದಿಕೆಯಲ್ಲಿ ಇರಬೇಕಾದುದನ್ನು ಮನವರಿಕೆ ಮಾಡಿಕೊಡುವುದರಲ್ಲಿ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಂ. ನಾಗರಾಜ್ ಹಾಗೂ ಸಂಘಟಕರು ವಿಫಲರಾಗಿದ್ದಾರೆ. ಹೀಗಾಗಿ ನಾನು ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ ಎಂದು ಮಹೇಶ ಜೋಶಿ ಅವರು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net