

ಬಂಟ್ವಾಳ: ಯುವವಾಹಿನಿ ಬಂಟ್ವಾಳ ಘಟಕದ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷೆ ವಿದ್ಯಾ ರಾಕೇಶ್ ತಿಳಿಸಿದರು.
ಯುವವಾಹಿನಿ ಬಂಟ್ವಾಳ ಘಟಕ ಆಯೋಜಿಸಿದ್ದ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೊಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಯುವವಾಹಿನಿ ಬಂಟ್ವಾಳ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಶಿಬಿರದಲ್ಲಿ ಒಟ್ಟು 424 ಶಿಬಿರಾರ್ಥಿಗಳು ಆಧಾರ್ ತಿದ್ದುಪಡಿ ನೊಂದಣಿ ಹಾಗೂ ಅಂಚೆ ಇಲಾಖೆಯ ವಿಮಾ ಸೌಲಭ್ಯಗಳ ಪ್ರಯೋಜನ ಪಡೆದರು.