ತಾಲೂಕು ಕೇಂದ್ರಗಳಲ್ಲಿ ಏಕೀಕೃತ ಆರೋಗ್ಯ ವ್ಯವಸ್ಥೆ

mng_17 feb ayush
ರಾಷ್ಟ್ರೀಯ ಆಯುಷ್ ಅಭಿಯಾನದಡಿ ಜೋಕಟ್ಟೆಯಲ್ಲಿ ಸರ್ಕಾರಿ ಆಯುರ್ವೇದ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
Published on

ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಅಲೋಪತಿ ಮತ್ತು ಆಯುರ್ವೇದಿಕ್ ಚಿಕಿತ್ಸೆಯನ್ನು ಒಂದೇ ಸೂರಿನಡಿ ಒದಗಿಸುವ ಏಕೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸೋಮವಾರ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಜೋಕಟ್ಟೆಯಲ್ಲಿ ಸರ್ಕಾರಿ ಆಯುರ್ವೇದ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಇದುವರೆಗೆ ಪ್ರತ್ಯೇಕವಾಗಿ ಅಲೋಪತಿ ಮತ್ತುವ ಆಯುಷ್ ಆಸ್ಪತ್ರೆಗಳು ಕಾರ್ಯಾಚರಿಸುತ್ತಿದ್ದವು. ಸಾರ್ವಜನಿಕರಿಗೆ ಈ ಎರಡೂ ವೈದ್ಯಕೀಯ ಸೇವೆಗಳು ಒಂದೇ ಕಡೆ ಲಭ್ಯವಾಗಲು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆ ಗಳಲ್ಲಿ ಕೆಲವು ಹಾಸಿಗೆಗಳನ್ನು ಆಯುಷ್ ಸೇವೆಗಳಿಗೆ ಕಾದಿರಿಸಲು ಚಿಂತಿಸಲಾಗಿದೆ. ಜೋಕಟ್ಟೆ ಆಯುರ್ವೇದಿಕ್ ಆಸ್ಪತ್ರೆಗೆ 2 ವೈದ್ಯರು ಮತ್ತು 6 ಅರೆ ವೈದ್ಯಕೀಯ ಸಿಬ್ಬಂದಿ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಈ ಆಸ್ಪತ್ರೆಯ ಸೇವೆಯನ್ನು ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರು ಪಡೆಯಬೇಕು ಎಂದರು.

ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಜೋಕಟ್ಟೆ ಗ್ರಾ.ಪಂ. ಅಧ್ಯಕ್ಷ ಉಮರ್ ಫಾರೂಕ್, ಮಹಾನಗರಪಾಲಿಕೆ ಸದಸ್ಯರಾದ ಅನಿಲ್ ಕುಮಾರ್, ಎಸಿ ವಿನಯರಾಜ್, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಜಿಲ್ಲಾ ಆಯಷ್ ಅಧಿಕಾರಿ ಡಾ. ಮುಹಮದ್ ಇಕ್ಬಾಲ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net