ಸಾಂಬಾರ ಬೆಳೆಗಳಲ್ಲಿ ಸಮಗ್ರ ಪೀಡೆ ನಿರ್ವಹಣೆ

26 ckm 1
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಅಖಿಲ ಭಾರತ ಸಮನ್ವಯಿತ ಪ್ರಾಯೋಜನೆ ಕಾರ್ಯಕ್ರಮದಡಿ ಆಯೋಜಿಸಲಾಗಿದ್ದ ಸಾಂಬಾರ ಬೆಳೆಗಳಲ್ಲಿ ಸಮಗ್ರ ಪೀಡೆ ನಿರ್ವಹಣೆ ಕುರಿತ ತರಬೇತಿ ಕಾರ್ಯಕ್ರಮವನ್ನುz್ದೆÃಶಿಸಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ.ಬಿ.ಎಂ.ದುಷ್ಯAತ್ ಮಾತನಾಡಿದರು.
Published on

ಚಿಕ್ಕಮಗಳೂರು: ಸಾಂಬಾರು ಬೆಳೆಗಳಲ್ಲಿ ಸಂಶೋಧನೆಗೆ ಅತಿ ಹೆಚ್ಚು ಮಹತ್ವವಿದ್ದು, ಯುವ ವಿಜ್ಞಾನಿಗಳು ಸಾಂಬಾರು ಬೆಳೆಗಳಲ್ಲಿ ಹೆಚ್ಚಿನ ಸಂಶೋಧನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ.ಬಿ.ಎಂ.ದುಷ್ಯAತ್ ಕರೆ ನೀಡಿದರು.

ಮೂಡಿಗೆರೆಯ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಅಖಿಲ ಭಾರತ ಸಮನ್ವಯಿತ ಪ್ರಾಯೋಜನೆ ಕಾರ್ಯಕ್ರಮದಡಿ ಆಯೋಜಿಸಲಾಗಿದ್ದ ಸಾಂಬಾರ ಬೆಳೆಗಳಲ್ಲಿ ಸಮಗ್ರ ಪೀಡೆ ನಿರ್ವಹಣೆ ಕುರಿತ ತರಬೇತಿ ಕಾರ್ಯಕ್ರಮ ಸಮಾರೋಪದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಾಂಬಾರ ಪದಾರ್ಥಗಳಲ್ಲಿ ಹೆಚ್ಚಿನ ಸಂಶೋಧನೆಗಳಾಗುವ ಮೂಲಕ ರೈತರಿಗೆ ಅನುಕೂಲ ಒದಗಿಸಿಕೊಡಬೇಕು ಎಂದು ಹೇಳಿದರು.
ತರಬೇತಿ ಕಾರ್ಯಕ್ರಮದಲ್ಲಿ ೧೬೦ ರೈತರು ಪಾಲ್ಗೊಂಡು ಪ್ರಯೋಜನ ಪಡೆದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹ ಸಂಶೋಧನಾ ನಿರ್ದೇಶಕ ಡಾ. ಎ.ಟಿ.ಕೃಷ್ಣಮೂರ್ತಿ ವಹಿಸಿದ್ದರು. ಸಮಗ್ರಪೀಡೆ ನಿರ್ವಹಣಾ ಕೇಂದ್ರದ ಜಂಟಿ ನಿರ್ದೇಶಕ ಡಾ.ಎ.ಸಿದ್ಧಿಕಿ, ವಿಜ್ಞಾನಿಗಳಾದ ಡಾ. ಎಂ.ವೈ.ಉಲ್ಲಾಸ, ಪ್ರಮುಖರಾದ ಡಾ. ಎಸ್.ಜೆ. ಅಂಕೇಗೌಡ, ಡಾ. ಎಂ.ಎಚ್. ಸುಚಿತ್ರ ಕುಮಾರಿ, ಡಾ.ಎಂ.ಎಸ್.ಪಲ್ಲವಿ, ಜಿ.ಸಿ.ಸಂಧ್ಯಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net