ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ

crime
Published on

ಹುಬ್ಬಳ್ಳಿ: ಅಂತರ ಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಇಲ್ಲಿಯ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಆಂಧ್ರಪ್ರದೇಶ ಮೂಲದ ಬಳ್ಳಾರಿ ಜಿಲ್ಲೆಯ ಗೋಟೂರ ಗ್ರಾಮದ ಗೌನಿ ನರೇಂದ್ರ ರೆಡ್ಡಿ ಬಂಧಿತ. ಬಂಧಿತನಿಂದ ಮೂರು ಲಕ್ಷ ರೂ. ಮೌಲ್ಯದ 4 ಬೈಕ್ ಹಾಗೂ ಒಂದು ಸ್ಕೂಟರ್ ಜಪ್ತಿ ಮಾಡಲಾಗಿದೆ. ನ. 4ರಂದು ಬೈಕ್ ಕಳವಾಗಿದ್ದರ ಕುರಿತು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಬಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಮಹ್ಮದ್ ರಫಿಕ್ ತಹಸೀಲ್ದಾರ್ ನೇತೃತ್ವದ ತಂಡ ಅಂತರ ಜಿಲ್ಲಾ ಕಳ್ಳನನ್ನು ಬಂಧಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net