

ಮಸ್ಕಿ: ಒಳ ಮೀಸಲಾತಿ ಜಾರಿಯಾಗುವವರೆಗೂ ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಬಾರದು ಎಂದು ಜಿಪಂ ಮಾಜಿ ಸದಸ್ಯ ದೊಡ್ಡಪ್ಪ ಮುರಾರಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಈಗಾಗಲೇ ಬೆಂಗಳೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಂಡಿದ್ದು,
ಮಾ.21ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು. ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ನೀಡಿದ ತೀರ್ಪು ಜಾರಿ ಮಾಡಬೇಕು. ಪ್ರಜಾಪ್ರಭುತ್ವದ ಆಶಯ ಈಡೇರಿಸಬೇಕು ಎಂದು ಆಗ್ರಹಿಸಿದರು. ಸಾಹಿತಿ ಸಿ.ದಾನಪ್ಪ ಮಾತನಾಡಿ, ಕಳೆದ ಮೂವತ್ತು ವರ್ಷಗಳಿಂದ ಒಳ ಮೀಸಲಾತಿಗಾಗಿ ಹೋರಾಟ ನಡೆಸಿಕೊಂಡು ಬರಲಾಗಿದೆ.
ಸುಪ್ರೀಂಕೋರ್ಟ್ ತೀರ್ಪಿಗೂ ಮನ್ನಣೆ ನೀಡದೇ ಇದ್ದರೆ ಮಾಡು ಇಲ್ಲವೆ ಮಡಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಪ್ರಮುಖರಾದ ಮೌನೇಶ ಜಾಲವಾಡಗಿ, ಕಾಸಿಮಪ್ಪ ಮುರಾರಿ, ಅಮರೇಶ ಮಲ್ಕಾಪುರ, ಪ್ರಶಾಂತ, ರಮೇಶ ಇತರರಿದ್ದರು.