ಒಳ ಮೀಸಲಾತಿ ಸಮೀಕ್ಷೆ: ತರಬೇತಿ ಕಾರ್ಯಗಾರಕ್ಕೆ ಚಾಲನೆ

raichur
raichur
Published on

 ರಾಯಚೂರು ನ್ಯಾ.ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜÁತಿಯ ಒಳ ಮೀಸಲಾತಿ ಸಮೀಕ್ಷೆಗೆ ಸಂಬAಽಸಿದAತೆ ಜಿ¯್ಲÁ ಮಟ್ಟದ ಮಾಸ್ಟರ್ ಟ್ರೆನರ್‌ಗಳಿಂದ ತಾಲೂಕಾ ಮಟ್ಟದ ಮಾಸ್ಟರ್ ಟ್ರೆನರ್‌ಗಳಿಗೆ ತರಬೇತಿ ಕಾರ್ಯಾಗಾರಕ್ಕೆ ಜಿ¯್ಲÁಽಕಾರಿ ನಿತೀಶ್ ಕೆ., ಚಾಲನೆ ನೀಡಿದರು.

ನಗರದ ನೂತನ ಜಿ¯್ಲÁಽಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಚಾಲನೆ ನೀಡಿ ಮಾತನಾಡಿ, ಟ್ರೆನರ್‌ಗಳು ಸಮೀಕ್ಷಾ ವ್ಯಾಪ್ತಿಯಲ್ಲಿರುವ ಮನೆಗಳಿಗೆ ಮತದಾರರ ಪಟ್ಟಿಯಲ್ಲಿರುವ ಮನೆ ಸಂಖ್ಯೆಗಳ ಆಧಾರದ ಮೇಲೆ ಭೇಟಿ ನೀಡಬೇಕು. ಪರಿಶಿಷ್ಟ ಜÁತಿಯ ಕುಟುಂಬಗಳನ್ನು ಗುರುತಿಸಬೇಕು. ಯಾವ ದಿನದಂದು, ಯಾವ ಯಾವ ಮನೆಗಳನ್ನು ಸಮೀಕ್ಷೆಗೆ ಒಳಪಡಿಸಲಾಗುವುದು ಎಂಬ ಮಾಹಿತಿಯನ್ನು ಆದಷ್ಟು ಮಟ್ಟಿಗೆ ಮುಂಚಿತವಾಗಿಯೆ ಗೊತ್ತುಪಡಿಸಿಕೊಳ್ಳಬೇಕು ಎಂದರು.

ಸಮೀಕ್ಷೆಯಲ್ಲಿ ಪರಿಶಿಷ್ಟ ಜÁತಿಯವರ ಯಾವುದೇ ಮನೆಯನ್ನು ಬಿಡದೆ, ಪ್ರತಿಯೊಂದು ಮನೆಗೆ ಭೇಟಿ ನೀಡಿ ಅಲ್ಲಿರುವ ಪ್ರತಿಯೊಂದು ಕುಟುಂಬದ ಎಲ್ಲ ಸದಸ್ಯರ ಮಾಹಿತಿಯನ್ನು ಮೊಬೈಲï ಆ್ಯ-ï‌ನಲ್ಲಿ ಭರ್ತಿ ಮಾಡಬೇಕು. ಸಮೀಕ್ಷೆ ನಡೆಸುವಾಗ ಸಮೀಕ್ಷೆ ಬ್ಲಾಕಿನ ಅಽಕೃತ ಭಾಗವಾಗಿರುವ ಯಾವುದೇ ಮನೆಯನ್ನು ಬಿಡಬೇಡಿ. ಅಲ್ಲದೆ ಕುಟುಂಬವನ್ನು ಭೇಟಿ ಮಾಡಿದಾಗ, ಪ್ರಶ್ನಾವಳಿಯನ್ನು ತುಂಬಲು ಆತುರಪಡಬೇಡಿ. ನಿಮ್ಮ ಭೇಟಿಯ ಉದ್ದೇಶದ ಬಗ್ಗೆ ಮಾಹಿತಿ ನೀಡುವವರಿಗೆ ಸಂಕ್ಷಿಪ್ತವಾಗಿ ತಿಳಿಸಿ ನಿಮ್ಮ ಪರಿಚಯವನ್ನು ಮಾಡಿಕೊಳ್ಳಿಬೇಕೆಂದರು.

ಸಂದರ್ಭದಲ್ಲಿ ಎಡಿಸಿ ಶಿವಾನಂದ,ಎಸಿ ಬಸವಣೆಪ್ಪಾ ಕಲಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದಪ್ಪ, ಡಿಡಿಪಿಐ ಕೆ.ಬಿ.ಬಡಿಗೇರ, ತರಬೇತಿದಾರರಾದ ಸದಾಶಿವಪ್ಪ ಸೇರಿದಂತೆ ಜಿ¯್ಲೆಯ ವಿವಿಧ ತಾಲೂಕಿನ ತಹಶೀಲ್ದಾರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net