ಅ.೧ರಂದು ಅಂತರರಾಷ್ಟ್ರೀಯ ಕಾಫಿ ದಿನಾಚರಣೆ

cofee bord
Published on

ಮಡಿಕೇರಿ: ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆ ವತಿಯಿಂದ ಅ.೧ರಂದು ಜಿಲ್ಲೆಯ ವಿವಿಧೆಡೆ ಅಂತರರಾಷ್ಟ್ರೀಯ ಕಾಫಿ ದಿನದ ಪ್ರಯುಕ್ತ ೪ ದಿನ ಕಾಫಿ ವಿತರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎ.ಅನಿತಾ ನಂದಾ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿದಾರರೊಂದಿಗೆ ಮಾತನಾಡಿದ ಅವರು, ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆ ಮತ್ತು ಭಾರತೀಯ ಕಾಫಿ ಮಂಡಳಿ, ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ಉಪಾಸಿ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆ.೩೦ರಂದು ಪೊನ್ನಂಪೇಟೆಯ ಸಿಐಟಿ ಎಂಜಿನಿಯರಿಂಗ್ ಕಾಲೇಜು, ಅ.೧ ಮಡಿಕೇರಿ ಸರ್ಕಾರಿ ಆಸ್ಪತ್ರೆ ಮತ್ತು ಮಾಲ್ದಾರೆ ಪಟ್ಟಣದಲ್ಲಿ ಕಾಫಿ ವಿತರಣ ಕಾರ್ಯಕ್ರಮ ನಡೆಯಲಿದೆ. ಅ.೪ರಂದು ಸೋಮವಾರಪೇಟೆ ಪಟ್ಟಣದ ಚಿಕ್ಕ ಬಸಪ್ಪ ಕ್ಲಬ್ ಮತ್ತು ಸರ್ಕಾರಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾಫಿ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕಾಫಿ ಮಂಡಳಿ ಉಪನಿದೇರ್ಶಕ ಡಾ.ವಿ.ಚಂದ್ರಶೇಖರ್, ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಬೆಳ್ಳಿಯಪ್ಪ, ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆ ಖಜಾಂಚಿ ಕುಮಾರಿ ಕುಂಞಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net