

ವಿಜಯವಾಣಿ ಸುದ್ದಿಜಾಲ ಧಾರವಾಡ
ಯುವಕರು ಮಾದಕ ವ್ಯಸನಗಳಿಂದ ದೂರವಿರಿದಕ ವ್ಯಸನಿಗಳಾಗುತ್ತಿರುವುದು ಖೇದಕರ ಸಂಗತಿ. ಯಾವುದೇ ಆಮಿಷಗಳಿಗೆ ಬಲಿಯಾಗದೆ ಆರೋಗ್ಯಕರ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಗ್ರಾಮೀಣ ಠಾಣೆ ಪಿಎಸ್‌ಐ ಬಿ.ಸಿ. ಮಗದುಮ್ ಹೇಳಿದರು.
ನಗರದ ಶ್ರೀಮತಿ ವಿದ್ಯಾ ಪಿ. ಹಂಚಿನಮನಿ ಪಿಯು ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ರಾಜು ಕಡೇಮನಿ ಮಾತನಾಡಿ, ಪೊಲೀಸ್ ಇಲಾಖೆಯಿಂದ ನಡೆಯುವ ಜಾಗೃತಿ ಕಾರ್ಯಗಳು ಶ್ಲಾಘನೀಯ. ಇಲಾಖೆಯ ಕಾರ್ಯಗಳಿಗೆ ಕೈ ಜೋಡಿಸಲಾಗುವುದು ಎಂದರು.
ಪೊಲೀಸ್ ಇಲಾಖೆ ಸಿಬ್ಬಂದಿ, ಹಂಚಿನಮನಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿದ್ದರು.