ವಿಜಯವಾಣಿ, ದಿಗ್ವಿಜಯ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನ

Yoga Meditation
Published on

ನಂ. 1 ಕನ್ನಡ ದಿನಪತ್ರಿಕೆ ‘ವಿಜಯವಾಣಿ’ ಮತ್ತು ‘ದಿಗ್ವಿಜಯ’ ಸುದ್ದಿವಾಹಿನಿ ವತಿಯಿಂದ ನಗರದ ಹೊಸಮಠದ ಶ್ರೀ ನಟರಾಜ ಶಿಕ್ಷಣ ಸಂಸ್ಥೆಗಳು, ಎಸ್‌ಜಿಎಸ್ ಅಂತಾರಾಷ್ಟ್ರೀಯ ಯೋಗ ಪ್ರತಿಷ್ಠಾನ, ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


ಹೊಸಮಠದ ಶ್ರೀ ನಟರಾಜ ಶಿಕ್ಷಣ ಸಂಸ್ಥೆಯ ಒಳಾಂಗಣದಲ್ಲಿ ಬೆಳಗ್ಗೆ 6 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಮೊದಲಿಗೆ ಸಾಮೂಹಿಕ ಯೋಗಾಭ್ಯಾಸ, ನಂತರ ಶ್ರೀ ಚಿದಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟನೆ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಒಂಬತ್ತು ಯೋಗ ಸಾಧಕರನ್ನು ಸನ್ಮಾನಿಸಲಾಗುವುದು.

ಶ್ರೀ ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್.ಶಿವರಾಜಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್, ಮೈಸೂರು ವಿವಿ ಯೋಗ ವಿಜ್ಞಾನ ಕಾಲೇಜಿನ ವ್ಯವಸ್ಥಾಪಕ ಪ್ರೊ.ಮದಿಅಲಗನ್, ಅಂತಾರಾಷ್ಟ್ರೀಯ ಯೋಗ ತೀರ್ಪುಗಾರ ಮತ್ತು ತರಬೇತುದಾರ ಎಚ್.ಎಂ.ರವಾಣಿಕರ್, ‘ವಿಜಯವಾಣಿ’ ದಿನಪತ್ರಿಕೆ ಮೈಸೂರು ಬ್ಯೂರೋ ಮುಖ್ಯಸ್ಥ ಎಂ.ಆರ್.ಸತ್ಯನಾರಾಯಣ ಪಾಲ್ಗೊಳ್ಳಲಿದ್ದಾರೆ. ಯೋಗ ಶಿಬಿರಾರ್ಥಿಗಳೂ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net