ಭಾರತ ಸಂವಿಧಾನ ವಿಶ್ವದಲ್ಲೇ ಮಾದರಿ

mkg1c
Published on

ಹೊನ್ನಾಳಿ: ಇಡೀ ವಿಶ್ವದಲ್ಲೇ ಮಾದರಿ ಸಂವಿಧಾನ ಹೊಂದಿರುವ ದೇಶ ಭಾರತ. ಇಂತಹ ಪವಿತ್ರವಾದ ಸಂವಿಧಾನ ರಚಿಸಿದವರು ನಮ್ಮ ಡಾ.ಅಂಬೇಡ್ಕರ್ ಎಂದು ಹೇಳಿಕೊಳ್ಳಲು ಹೆಮ್ಮೆ ಎನ್ನಿಸುತ್ತದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ತಾಲೂಕು ಅಡಳಿತ, ತಾಪಂ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು,

ಇಂದು ರಾಜ್ಯದಿಂದ ಹಿಡಿದು ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಹಂತಗಳವರೆಗೆ ಏಕಕಾಲಕ್ಕೆ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮ ನಡೆಯುತ್ತಿದ್ದು, ಸುಮಾರು 2 ಕೋಟಿ ಜನ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಪ್ರಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಧನಂಜಯ ಅವರು ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ಎಲ್ಲರಿಗೂ ಬೋಧಿಸಿದರು.

ತಹಸೀಲ್ದಾರ್ ಪಟ್ಟರಾಜೇಗೌಡ, ತಾಪಂ ಇಒ ರಾಘವೇಂದ್ರ, ಬಿಇಒ ನಂಜರಾಜ್, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ತಿಪ್ಪೇಶಪ್ಪ, ಸಮಾಜದ ಕಲ್ಯಾಣ ಇಲಾಖೆ ಅಧಿಕಾರಿ ಉಮಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೃತ್ಯುಂಜಯ, ಸಿಪಿಐ ಸಿದ್ದೇಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ. ಕೆಂಚಪ್ಪ ಆರ್. ಬಂತಿ, ಪುರಸಭೆ ಮುಖ್ಯಾಧಿಕಾರಿ ನಿರಂಜನಿ, ಕೃಷಿ ಅಧಿಕಾರಿ ಪ್ರತಿಮಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net