ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

International Democracy Day
Published on

ಬಂಕಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್​ನಲ್ಲಿ ಭಾನುವಾರ ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.

ರಾಜ್ಯಶಾಸ್ತ್ರದ ಉಪನ್ಯಾಸಕ ಡಾ.ವಿಜಯಕುಮಾರ ಗುಡಗೇರಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ ಜನರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ದೊರೆಯುವ ಜತೆಗೆ ಭ್ರಾತತ್ವ ಭಾವನೆ ಬೆಳೆಸುತ್ತದೆ. ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಎಲ್ಲ ಜನರು ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ಪ್ರಾಚಾರ್ಯ ಡಾ.ರಮೇಶ ತೆವರಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಮಂಜುನಾಥ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ದಿನೇಶಪ್ಪ ಶಿಂಗಾಪೂರ, ಪ್ರೊ.ನಿಂಗಪ್ಪ ಕಲಕೋಟಿ, ವಿಜಯಲಕ್ಷ್ತ್ರಿ್ಮ ಸಿ., ಲುಬ್ನಾನಾಝå್, ಡಾ.ನಾಜನೀನ್ ಹಿರೇಕುಂಬಿ, ಅಚಿಜಲೀನಾ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net