ನೌಕರರ ಪಾಲ್ಗೊಳ್ಳುವಿಕೆ ಕಡ್ಡಾಯ

international democracy day celebration koppal dc meeting
Published on

ಕೊಪ್ಪಳ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸೆ.15ರಂದು ಆಚರಣೆಯಾಗಲಿದ್ದು, ಎಲ್ಲ ಅಧಿಕಾರಿಗಳ ಪಾಲ್ಗೊಳ್ಳುವಿಕೆ ಕಡ್ಡಾಯವೆಂದು ಜಿಲ್ಲಾಧಿಕಾರಿ ನಲಿನ್​ ಅತುಲ್​ ಅಧಿಕಾರಿಗಳಿಗೆ ನಿರ್ದೇಶಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಎಲ್ಲ ಇಲಾಖೆಗಳು ಕೂಡಿಕೊಂಡು ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿ. ಸೋಂಪೂರ ಹೆದ್ದಾರಿಯಿಂದ ಮುನಿರಾಬಾದ್​ ಡ್ಯಾಂ ವರೆಗಿನ ಮಾನವಸರಪಳಿ ಕಾರ್ಯಕ್ರಮ ಇರಲಿದೆ. ತುರ್ತು ಕರ್ತವ್ಯ ಹೊರತುಪಡಿಸಿ ಇತರೆಲ್ಲ ಅಧಿಕಾರಿ, ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿ. ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಿ. ತಾಲೂಕುವಾರ ಸರ್ಕಾರದ ವಿವಿಧ ಯೋಜನೆಗಳು, ಗ್ಯಾರಂಟಿ ಯೋಜನೆಗಳನ್ನು ಕಾರ್ಯಕ್ರಮಕ್ಕೆ ಕರೆತನ್ನಿ ಎಂದು ಆಯಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಮಾತನಾಡಿ, ಮಾನವ ಸರಪಳಿ ರಚನೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿದ್ದು, ಸಮರ್ಪಕವಾಗಿ ನಿಭಾಯಿಸಿ. ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಜಾಪ್ರಭುತ್ವ ದಿನಚಾರಣೆ ಮಹತ್ವ ಬಿಂಬಿಸುವ ಚಿತ್ರ, ಸಂವಿಧಾನ ಪುಸ್ತಕದ ಚಿತ್ರಣ ಇರಿಸಿ. ಕೊಪ್ಪಳದ ಅಶೋಕ ವೃತ್ತದಲ್ಲಿ ಸಂವಿಧಾನ ಪ್ರಸ್ತಾವನೆ ಬೋಧನೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಎಡಿಸಿ ಸಿದ್ರಾಮೇಶ್ವರ ಮಾತನಾಡಿ, ಮಾನವ ಸರಪಳಿ 55 ಕಿ.ಮೀ. ಉದ್ದವಿರಲಿದೆ. 20 ಗ್ರಾಪಂಗಳು ಬರಲಿವೆ. ಒಂದು ಮೀಟರ್​ಗೆ ಒಬ್ಬರಂತೆ 55&60 ಸಾವಿರ ಜನರನ್ನು ಸೇರಿಸಲು ಯೋಜಿಸಲಾಗಿದೆ. ಪ್ರತಿ 100 ಮೀಟರ್​, ಕಿ.ಮೀ.ಗೆ ನೋಡಲ್​ ಅಧಿಕಾರಿಗಳನ್ನು ನೇಮಿಸಲಾಗುವುದು. ಎಲ್ಲ ಅಧಿಕಾರಿಗಳು ಸಹಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ತಿಳಿಸಿದರು.

ಎಎಸ್ಪಿ ಹೇಮಂತ್​ ಕುಮಾರ್​, ಎಸಿ ಕ್ಯಾ.ಮಹೇಶ ಮಾಲಗಿತ್ತಿ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್​., ಡಿಯುಡಿಸಿ ಪಿಡಿ ರೇಷ್ಮಾ ಹಾನಗಲ್​, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ, ತಸಹೀಲ್ದಾರ್​ ವಿಠ್ಠಲ ಚೌಗಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net