ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಯಲ್ಲಿ ಅಂತಾರಾಷ್ಟ್ರೀಯ ಶ್ರೇಷ್ಠತೆ

pdb (3)
Published on

ಪಡುಬಿದ್ರಿ: ಮಾನವ ದೇಹದ ಅಮೂಲ್ಯ ಅತ್ಯಗತ್ಯ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಯ ಹೃದಯ ಹಾಗೂ ಶ್ವಾಸಕೋಶ ವಿಭಾಗದಲ್ಲಿ ಅಂತಾರಾಷ್ಟ್ರೀಯ ಶ್ರೇಷ್ಠತೆಯನ್ನು 400 ಯಶಸ್ವಿ ಶಸ್ತ್ರಚಿಕಿತ್ಸೆಗಳ ಮೂಲಕ ಪ್ರಮಾಣಪಡಿಸಿದ ಡಾ.ಕೆ.ಜಿ.ಸುರೇಶ ರಾವ್ ಅವರಿಗೆ ಹುಟ್ಟೂರು ಕೆಮುಂಡೇಲಿನಲ್ಲಿ ಬುಧವಾರ ಗೌರವಾರ್ಪಣೆ ನಡೆಯಿತು.

ಕೆಮುಂಡೇಲಿನ ಶ್ರೀ ಪಾಂಡುರಂಗ ಭಜನಾ ಮಂಡಳಿ, ಕೆಮುಂಡೇಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಳೆವಿದ್ಯಾರ್ಥಿ ಸಂಘ, ಉಳ್ಳೂರು ಗ್ರಾಮಸ್ಥರು ಕೆಮುಂಡೇಲು ಭಜನಾ ಮಂಡಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಭಿನವ ಧನ್ವಂತರಿ ಉಪಾದಿಯನ್ನು ನೀಡಿ ಡಾ.ಸುರೇಶ್ ರಾವ್ ಮತ್ತು ಪತ್ನಿ ನೇತ್ರ ತಜ್ಞೆ ಡಾ.ಕಲ್ಪನಾ ಅವರನ್ನು ಅಭಿನಂದಿಸಲಾಯಿತು.

ಭಜನಾ ಮಂಡಳಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ಯುಎಸ್‌ಎಎಂಎಸ್ ಅಕಾಡೆಮಿಕ್ಸ್ ಆ್ಯಂಡ್ ಟ್ರೈನಿಂಗ್‌ನ ನಿರ್ದೇಶಕ ಡಾ.ಸಿ.ಕೆ.ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ರಮೇಶ ಹಂದೆ, ಎನ್‌ಎಸ್‌ಯುಎಂ ಪ.ಪೂ. ಕಾಲೇಜಿನ ಪ್ರಾಂಶುಪಾಲ ಪ್ರಕಾಶ ಶೆಣೈ, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ನಿವೃತ್ತ ಪಾಂಶುಪಾಲೆ ಬಿ.ಆರ್.ನಾಗರತ್ನಾ, ಕೆಮುಂಡೇಲು ಶಾಲೆಯ ಮುಖ್ಯಶಿಕ್ಷಕ ಜಗನ್ನಾಥ ಶೆಟ್ಟಿ, ಭಜನಾ ಮಂಡಳಿ ಅರ್ಚಕ ಶ್ರೀಪತಿ ಆಚಾರ್ಯ, ಬಾಲಕೃಷ್ಣ ರಾವ್, ಕೆ.ಎಲ್.ಕುಂಡಂತಾಯ, ಹರೀಶ ಕೋಟ್ಯಾನ್ ಉಪಸ್ಥಿತರಿದ್ದರು. ಭಜನಾ ಮಂಡಳಿಯ ಕಾರ್ಯದರ್ಶಿ ಕೃಷ್ಣಾನಂದ ರಾವ್ ಸ್ವಾಗತಿಸಿದರು. ಪ್ರಾಧ್ಯಾಪಕ ದೇವಿಪ್ರಸಾದ ಬೆಳ್ಳಿಬೆಟ್ಟು ನಿರೂಪಿಸಿದರು. ಹರೀಶ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net