ಡಿ. 21ರಿಂದ ಮೂಡುಬಿದಿರೆಯಲ್ಲಿ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ

jjjjjjjj
Published on

ಮಂಗಳೂರು : ಭಾರತ್ ಸ್ಕೌಟ್ಸ್-ಗೈಡ್ಸ್ ಕರ್ನಾಟಕ, ಮೂಡುಬಿದಿರೆ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿಶ್ವದಲ್ಲೇ ಪ್ರಥಮ ಬಾರಿಗೆ ಡಿ. 21ರಿಂದ 27ರವರೆಗೆ ವಿನೂತನವಾದ ‘ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ-2022’ ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ.
ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಒಂದು ಅನುಪಮ ಕಲಾ ಸಂಗಮವಾಗಿದ್ದು, ದೇಶದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಯುವ ಮನಸ್ಸುಗಳನ್ನು ಬೆಸೆಯುವುದು ಇದರ ಮುಖ್ಯ ಆಶಯವಾಗಿದೆ. 7 ದಿನಗಳ ಕಾಲ ನಡೆಯಲಿರುವ ಈ ಶಿಬಿರದಲ್ಲಿ ದೇಶ ವಿದೇಶಗಳಿಂದ 50 ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳು, ಸುಮಾರು 10 ಸಾವಿರ ತರಬೇತುದಾರರು ಭಾಗವಹಿಸಲಿದ್ದಾರೆ ಎಂದು ಭಾರತ್ ಸ್ಕೌಟ್ಸ್-ಗೈಡ್ಸ್‌ನ ದ.ಕ.ಜಿಲ್ಲಾ ಮುಖ್ಯ ಆಯುಕ್ತ ಡಾ. ಎಂ. ಮೋಹನ್ ಆಳ್ವ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net