ಸೆ. 6ರಿಂದ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕರಾಟೆ ಟೂರ್ನಮೆಂಟ್

mng-june23-pressmeet
Published on


ಮಂಗಳೂರು: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೊಜೊ ಇದರ 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ  ಸೆಪ್ಟೆಂಬರ್ 6ರಿಂದ 8 ತನಕ ನಗರದ ಕುಲಶೇಖರ ಕೋರ್ಡೆಲ್ ಚರ್ಚ್ ಹಾಲ್‌ನಲ್ಲಿ ಅಂತಾರಾಷ್ಟ್ರೀಯ ಕರಾಟೆ ಟೂರ್ನಮೆಂಟ್ ನಡೆಯಲಿದೆ.ಭಾರತದ 3 ಸಾವಿರಕ್ಕೂ ಅಧಿಕ ಕರಾಟೆ ಪಟುಗಳು, 15ಕ್ಕೂ ಹೆಚ್ಚು ರಾಷ್ಟ್ರಗಳ ಕರಾಟೆ ಕ್ರಿಡಾಪಟುಗಳು ಭಾಗವಹಿಸಲಿದ್ದಾರೆ. ಸಣ್ಣ ಮಕ್ಕಳಿಂದ ದೊಡ್ಡವರವರೆಗೆ ಎಲ್ಲ ವಿಭಾಗಗಳಲ್ಲೂ ಸ್ಪರ್ಧೆಗಳು ನಡೆಯಲಿವೆ ಎಂದು ಸಂಸ್ಥೆಯ ಪೋಷಕ ತೇಜೋಮಯ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕಳೆದ ಮೇನಲ್ಲಿ ಇದೇ ಟೂರ್ನಮೆಂಟ್‌ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ ಸಾಧ್ಯವಾಗಿಲ್ಲ ಎಂದರು.ಗೋಷ್ಠಿಯಲ್ಲಿ ಶಾಸಕ ವೇದವ್ಯಾಸ್ ಕಾಮತ್, ಇಂಡಿಯನ್ ಕರಾಟೆ ಮಂಗಳೂರು ಡೊಜೊ ಅಧ್ಯಕ್ಷ ಡಾ.ಎ. ಸದಾನಂದ ಶೆಟ್ಟಿ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಅಧ್ಯಕ್ಷ ಈಶ್ವರ್ ಕಟೀಲ್, ಪ್ರಮುಖರಾದ ಸುರೇಂದ್ರ ಬಿ., ರಾಜ್ ಗೋಪಾಲ್ ರೈ, ಜನಾರ್ದನ್ ನಾಯ್ಕ, ಫಾ. ಕ್ಲಿಫರ್ಡ್ ಫರ್ನಾಂಡಿಸ್ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net