ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಗೆ ಮನ್ನಣೆ

23 gvt 01
ಗಂಗಾವತಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ ಮುಖರ್ಜಿ ಪುಣ್ಯತಿಥಿ ಭಾನುವಾರ ಆಚರಿಸಲಾಯಿತು. ಮಾಜಿ ಶಾಸಕ ಪರಣ್ಣಮುನವಳ್ಳಿ, ಮಾಜಿ ಸಂಸದ ಎಸ್.ಶಿವರಾಮನಗೌಡ, ನಗರಸಭೆ ಮಾಜಿ ಸದಸ್ಯ ರಾಚಪ್ಪ ಸಿದ್ದಾಪುರ ಇತರರಿದ್ದರು.
Published on

ಗಂಗಾವತಿ: ನಗರದ ಬಿಜೆಪಿ ಕಚೇರಿಯಲ್ಲಿ ವಿವಿಧ ಮೋರ್ಚಾದಿಂದ ಡಾ.ಶ್ಯಾಮ ಪ್ರಸಾದ ಮುಖರ್ಜಿ ಬಲಿದಾನ ದಿವಸ್ ಭಾನುವಾರ ಆಚರಿಸಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿದರು.

ಮಾಜಿ ಶಾಸಕ ಪರಣ್ಣಮುನವಳ್ಳಿ ಮಾತನಾಡಿ, ಮುಖರ್ಜಿ ತ್ಯಾಗಬಲಿದಾನದಿಂದ ಬಿಜೆಪಿ ಕೇಂದ್ರ ಮತ್ತು ಹಲವು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಕಾರಣವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಗೆ ಉತ್ತಮ ಹೆಸರಿದ್ದು, ಹೆಮ್ಮರವಾಗಿ ಬೆಳೆದಿದೆ. ಕಾರ್ಯಕರ್ತರು ಹಿರಿಯ ಸಂಸ್ಥಾಪಕರ ಮಾರ್ಗದರ್ಶನದಲ್ಲಿ ಪಕ್ಷ ಕಟ್ಟುವ ಕೆಲಸ ಮಾಡಬೇಕಿದೆ ಎಂದರು.

ಪಕ್ಷ ಸಂಘಟನೆ ಮತ್ತು ನಿಸ್ವಾರ್ಥ ಸೇವೆ ಕುರಿತು ಮಾಜಿ ಸಂಸದ ಎಸ್.ಶಿವರಾಮಗೌಡ ಮಾತನಾಡಿದರು. ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಚನ್ನಪ್ಪ ಮಳಗಿ, ಎಸ್‌ಟಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಡಬ್ಲು ವೀರಭದ್ರಪ್ಪ ನಾಯಕ, ನಗರಸಭೆ ಮಾಜಿ ಸದಸ್ಯ ರಾಚಪ್ಪ ಸಿದ್ದಾಪುರ, ವಿವಿಧ ಮೋರ್ಚಾ ಪದಾಧಿಕಾರಿಗಳಾದ ವಿಜಯಪದ್ಮಾ, ರಮೇಶ ಹತ್ತಿಮರದ, ಬಸವಂತಗೌಡ,ಶ್ರೀನಿವಾಸ ಧೂಳಾ, ಸಂಗಯ್ಯಸ್ವಾಮಿ ಸಂಶಿಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net