ಅಂತಾರಾಷ್ಟ್ರೀಯ ಸಾಕ್ಷರತಾ ದಿನ

International Literacy Day
ಬಾಗಲಕೋಟೆ, ಅಂತಾರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ., Bagalkote, International Literacy Day, District Collector Janaki K.M.
Published on

ಬಾಗಲಕೋಟೆ: ಅಂತಾರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಅಧ್ಯಕ್ಷೆ ಜಾನಕಿ ಕೆ.ಎಂ.ಶುಕ್ರವಾರ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿದರು.

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ವಿ.ವೈ.ಜೇವರಗಿ ಸಾಕ್ಷರತಾ ಪ್ರಮಾಣ ವಚನ ಬೋಧಿಸಿದರು. ಜಿಲ್ಲಾಧಿಕಾರಿ ಜಾನಕಿ ಕೆ.ಎಂ.ನವಸಾಕ್ಷರರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನೀಲ ಭಗಟಿ, ಶಿಕ್ಷಣ ಇಲಾಖೆ ಉಪ ಸಮನ್ವಯಾಧಿಕಾರಿ ಸಿ.ಆರ್.ಓಣಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net