ನ.19ರಂದು ನಗರದಲ್ಲಿ ಅಂತಾರಾಷ್ಟ್ರೀಯ ಕಿರು ಚಿತ್ರೋತ್ಸವ: 13 ಕಿರುಚಿತ್ರ ಪ್ರದರ್ಶನ, ಸಂವಾದ

International Short Film Festival mandya
Published on

ಮಂಡ್ಯ: ನಗರದ ವಿವೇಕಾನಂದ ರಂಗಮಂದಿರದಲ್ಲಿ ನ.19ರಂದು ಅಂತಾರಾಷ್ಟ್ರೀಯ ಕಿರು ಚಿತ್ರೋತ್ಸವ ಆಯೋಜಿಸಲಾಗಿದೆ ಎಂದು ಮಂಡ್ಯ ಅಂತಾರಾಷ್ಟ್ರೀಯ ಕಿರು ಚಿತ್ರೋತ್ಸವದ ಸಂಸ್ಥಾಪಕ ಅಧ್ಯಕ್ಷ ಎಂ.ಜಿ.ವಿನಯ್‌ಕುಮಾರ್ ತಿಳಿಸಿದರು.

ಅಂದು ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳುವ ಉತ್ಸದಲ್ಲಿ 13 ಕಿರುಚಿತ್ರ ಪ್ರದರ್ಶನ ಮತ್ತು ಚಿತ್ರ ತಂಡದೊಡನೆ ಸಂವಾದ ನಡೆಯಲಿದೆ. ಸಂಜೆ 5.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭವಿರಲಿದೆ. ಈ ಬಾರಿಯ ಉತ್ಸವದ ನಿರ್ದೇಶಕರಾಗಿರುವ ಖ್ಯಾತ ರಂಗಕರ್ಮಿ ಬಿ.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಉದ್ಘಾಟಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ, ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ, ಚಿತ್ರನಟ ಅಭಿಷೇಕ್ ಅಂಬರೀಷ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಸತ್ವ ಗ್ರೂಪ್ಸ್‌ನ ಜನರಲ್ ಮ್ಯಾನೇಜರ್ ಸೆಂಥಿಲ್, ಸೈಮಾ ಪ್ರಶಸ್ತಿ ಪುರಸ್ಕೃತ ನಟ ಚಂದನ್ ಆಚಾರ್, ಹೆರಿಗೆ ಮತ್ತು ಪ್ರಸೂತಿ ತಜ್ಞೆ ಡಾ.ಬಿ.ಎನ್.ಪ್ರಭಾವತಿ, ಅಂಬರೀಷ್ ಅಭಿಮಾನಿ ಬಳಗದ ಬೇಲೂರು ಸೋಮಶೇಖರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಚಿತ್ರೋತ್ಸವದಲ್ಲಿ 200ಕ್ಕೂ ಹೆಚ್ಚು ಕಿರುಚಿತ್ರಗಳು ಬಂದಿದ್ದು, ಈ ಪೈಕಿ 13 ಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಒಂದು ಚಿತ್ರವನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಲಾಗುವುದು. ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ತೀರ್ಪುಗಾರರಾಗಿದ್ದ ಸತ್ಯಹೆಗಡೆ, ಪ್ರೊ.ಫಣಿರಾಜ್, ಎಲ್.ಮೋಹನ್ ಇಲ್ಲಿಯೂ ತೀರ್ಪುಗಾರರಾಗಿ ಭಾಗವಹಿಸುವರು ಎಂದು ವಿವರಿಸಿದರು.

ಎಂ.ವಿನಯ್‌ಕುಮಾರ್, ನವೀನ್ ಚಿಕ್ಕಮಂಡ್ಯ, ಎಂ.ಎನ್.ಶಿವಕುಮಾರ್ ಆರಾಧ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net