

ಹುಬ್ಬಳ್ಳಿ: ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಹಿರಿಯ ಕ್ರೀಡಾಪಟು ಶಿವಪ್ಪ ಎಂ. ಸಲಕಿ ಅವರು ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಜುಲೈ 31ರಿಂದ ಆಗಸ್ಟ್ 6ರ ವರೆಗೆ ದುಬೈನಲ್ಲಿ ಸಂಯುಕ್ತ ಭಾರತೀಯ ಖೇಲ್ ಫೌಂಡೇಷನ್ (ಎಸ್ ಬಿಕೆಎಫ್) ಆಯೋಜಿಸಿದ್ದ 8ನೇ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸಲಕಿ ಅವರು 400 ಮೀ. 800 ಮೀ. ಹಾಗೂ 1500 ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಹಿರಿಯ ಕ್ರೀಡಾಪಟುವಿಗೆ ರಾಜ್ಯ ನಿವೃತ್ತ ನೌಕರರ ಸಂಘ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.