ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ

05-03-Shiva-3
Published on

ರಾಯಚೂರು: ಕುಟುಂಬ ನಿರ್ವಹಣೆ ಕಾರಣಕ್ಕೆ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷೃ ವಹಿಸುತ್ತಿದ್ದಾರೆ. ಮಹಿಳೆಯರು ಆರೋಗ್ಯವಾಗಿದ್ದಾಗ ಕುಟುಂಬ ಮತ್ತು ದೇಶ ಆರೋಗ್ಯವಾಗಿರಲು ಸಾಧ್ಯ ಎಂದು ಡಿಎಚ್‌ಒ ಡಾ.ಸುರೇಂದ್ರಬಾಬು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಭಾನುವಾರ ಮಾತನಾಡಿದರು. ಆರೋಗ್ಯವಂತ ಮಹಿಳೆಯರಿಂದ ಆರೋಗ್ಯಕರ ಭಾರತ ಎಂಬ ಘೋಷವಾಕ್ಯದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಹಿಳೆಯರ ರಕ್ಷಣೆಯೊಂದಿಗೆ ಅವರ ಆರೋಗ್ಯ ರಕ್ಷಣೆಯೂ ಅತ್ಯಂತ ಮುಖ್ಯವಾಗಿದೆ. ಗರ್ಭಕೋಶ, ಸ್ತನ ಕ್ಯಾನ್ಸರ್ ಸೇರಿ ಇತರ ರೋಗಗಳ ಬಗ್ಗೆ ಜಾಗೃತರಾಗಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ಡಾ.ಸುರೇಂದ್ರಬಾಬು ಸಲಹೆ ನೀಡಿದರು. ಡಿಎಚ್‌ಒ ಕಚೇರಿಯಲ್ಲಿ ಜಾಥಾ ಮುಕ್ತಾಯಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net