ಸಾಧಕಿಯರ ಜೀವನ ಎಲ್ಲರಿಗೂ ಆದರ್ಶ

16 siraguppa 04
ಸಿರಗುಪ್ಪದ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ನಗರಸಭೆ ಅಧ್ಯಕ್ಷೆ ಕೆ.ಸುಶೀಲಮ್ಮ ವೆಂಕಟರಾಮ ರೆಡ್ಡಿ ಉದ್ಘಾಟಿಸಿದರು. ಪ್ರಾಧ್ಯಾಪಕ ಚಂದ್ರಕಾಂತ, ಉಪನ್ಯಾಸಕಿ ಅಮರೇಶ್ವರಿ, ಅಂಗನವಾಡಿ ಮೇಲ್ವಿಚಾರಕಿಯರಾದ ಗಂಗಮ್ಮ ಇದ್ದರು.
Published on

ಸಿರಗುಪ್ಪ: ಇತಿಹಾಸ ಮತ್ತು ಸಮಕಾಲೀನ ಸಮಾಜಕ್ಕೆ ಮಹಿಳೆಯರು ನೀಡಿರುವ ಕೊಡುಗೆಯನ್ನು ತಿಳಿಸುವುದೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ದೇಶ ಎಂದು ಡಿವೈಎಸ್ಪಿ ವೆಂಕಟೇಶ್ ತಿಳಿಸಿದರು.

ನಗರದ ನೀಲಕಂಠೇಶ್ವರ ಸ್ವಾಮಿ ದೇವಸ್ಥನದ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ (ರಿ) ಆಶ್ರಯದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿ ಗುರುವಾರ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಮಾತನಾಡಿ, ಸಾಂಸ್ಕೃತಿಕ, ರಾಜಕೀಯ, ಸಾಮಾಜಿಕ, ಆರ್ಥಿಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಮಹಿಳೆಯರ ಜೀವನವನ್ನು ಆದರ್ಶವಾಗಿಟ್ಟುಕೊಳ್ಳಬೇಕೆಂದು ಸಲಹೆ ನೀಡದರು.

ಉಪನ್ಯಾಸಕಿ ಅಮರೇಶ್ವರಿ ಮಾತನಾಡಿ, ಸಮಾಜದಲ್ಲಿ ಹೆಣ್ಣು-ಗಂಡು ಎಂಬ ತಾರತಮ್ಯವನ್ನು 12ನೇ ಶತಮಾನದಲ್ಲಿ ಬಸವಣ್ಣನವರು ತೊಡೆದು ಹಾಕುವ ಮೂಲಕ ಇಬ್ಬರೂ ಸಮಾನರೆಂದು ಜಗತ್ತಿಗೆ ಸಾರಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ನೀಡಿದ್ದು, ಮಹಿಳಾ ಜಗತ್ತಿಗೆ ನೀಡಿದ ಕೊಡುಗೆ ಅಪಾರ. ಆದರೆ ಇಂದಿಗೂ ನಮ್ಮ ಜಮಾಜದಲ್ಲಿ ಹೆಣ್ಣು ಮಕ್ಕಳನ್ನು ಸಮಾನ ದೃಷ್ಟಿಯಲ್ಲಿ ನೋಡುತ್ತಿಲ್ಲ. ಆದರೂ ಮಹಿಳೆ ಮನೆಯೊಳಗೆ ಹೊರಗೆ ದುಡಿಯುತ್ತಿದ್ದು, ಸಂಸಾರದ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಪ್ರಾಧ್ಯಾಪಕ ಚಂದ್ರಕಾಂತ ಮಾತನಾಡಿದರು. ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಿಂದ ತಯಾರಿಸಲಾದ ಸಿರಿಧಾನ್ಯಗಳು ಮತ್ತು ಮೌಲ್ಯವರ್ಧಕ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು. ನಗರಸಭೆ ಅಧ್ಯಕ್ಷ ಕೆ.ಸುಶೀಲಮ್ಮ ವೆಂಕಟರಾಮರೆಡ್ಡಿ, ತಾಲೂಕು ಯೋಜನಾಧಿಕಾರಿ ಸುಧೀರ್ ಹಂಗಳೂರು, ಸಮನ್ವಯಾಧಿಕಾರಿ ನೇತ್ರಾವತಿ, ಮೇಲ್ವಿಚಾರಕಿ ರೂಪಾ, ಕೃಷಿ ಮೇಲ್ವಿಚಾರಕ ಪ್ರಭು, ಅಂಗನವಾಡಿ ಮೇಲ್ವಿಚಾರಕಿ ಗಂಗಮ್ಮ, ಮುಖಂಡರಾದ ವೆಂಕಟರಾಮರೆಡ್ಡಿ, ಬುಟ್ಟಾ ಶ್ರೀರಾಮುಲು, ಕೋಟಿರೆಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net