ಜೂ.೨೧ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ

ayush elake
Published on

ಮಡಿಕೇರಿ: ಕೊಡಗು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಸಹಯೋಗದಲ್ಲಿ ನಗರದ ಕೆಳಗಿನ ಗೌಡ ಸಮಾಜದಲ್ಲಿ ಜೂ.೨೧ ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ತಿಳಿಸಿದರು.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.೨೧ರಂದು ಬೆಳಗ್ಗೆ ೬.೩೦ ಗಂಟೆಗೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆಗೊಳ್ಳಲಿದೆ. ಅಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಯೋಗ ಪ್ರದರ್ಶನ ನೀಡಲಿದ್ದಾರೆ. ಸಾವಿರಕ್ಕೂ ಅಧಿಕ ಯೋಗ ಆಸಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಂದು ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಸಣ್ಣ ನೀರಾವರಿ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್‌ಗೌಡ ವಹಿಸಲಿದ್ದು, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್, ಎಂಎಲ್‌ಸಿ ಸುಜಾ ಕುಶಾಲಪ್ಪ, ಎಸ್.ಎಲ್.ಬೋಜೇಗೌಡ, ಶಾಸಕ ಧನಂಜಯ ಸರ್ಜಿ, ನಗರಸಭೆ ಸದಸ್ಯೆ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ ರಾಜಾ, ಎಸ್‌ಪಿ ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.


ಸುದ್ದಿಗೋಷ್ಠಿಯಲ್ಲಿ ಯೋಗ ಶಿಕ್ಷಕ ಮಹೇಶ್ ಕುಮಾರ್, ಜಿಲ್ಲಾಸ್ಪತ್ರೆ ಪ್ರಕೃತಿ ಚಿಕಿತ್ಸೆ ವೈದ್ಯಾಧಿಕಾರಿ ಡಾ.ಪಿ.ಬಿ.ಅರುಣ್, ಪತಂಜಲಿ ಯೋಗ ಶಿಕ್ಷಣ ಕೇಂದ್ರದ ಶಿಕ್ಷಕ ಎಂ.ಯು.ಸುಧಾಕರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net