

ಮಡಿಕೇರಿ:
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮ ಮಂಗಳವಾರ ನಡೆಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಕಾರ್ಯಕ್ರಮ ಉದ್ಘಾಟಿಸಿದರು.
ನಂತರ ಮಾತನಾಡಿ ಸುರಕ್ಷಿತ ಅಂತರ್ಜಾಲ ದಿನದ ಬಗ್ಗೆ ಮಾಹಿತಿ ನೀಡಿದರು. ಎನ್‌ಐಸಿ ಅಧಿಕಾರಿಗಳಾದ ಸಿಂಧೂರ ತಳವಾರ ಅವರು ಸುರಕ್ಷಿತ ಇಂಟರ್ನೆಟ್ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಅಧಿಕಾರಿಗಳು ಹಾಗೂ ಆಡಳಿತ ಸಿಬ್ಬಂದಿ ಹಾಗೂ ಎನ್‌ಐಸಿ ಸಿಬ್ಬಂದಿ ಭಾಗಿಯಾಗಿದ್ದರು.