ಅಂತಾರಾಜ್ಯ ಕಳ್ಳರ ಬಂಧನ, ವಾಹನಗಳ ವಶಕ್ಕೆ ಪಡೆದ ಪೊಲೀಸರು

4cmy4
Published on

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರ ಠಾಣೆಯ ಪೊಲೀಸರು ಅನುಮಾನಾಸ್ಪದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ನಾಲ್ಕು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನೆರೆಯ ಆಂಧ್ರಪ್ರದೇಶದ ಮದನಪಲ್ಲಿ ಚಂದ್ರ ಕಾಲನಿಯ ನಿವಾಸಿಗಳಾದ ಉದಯ್ ಕುಮಾರ್, ಆಟೋ ಚಾಲಕ ಶ್ರೀನಿವಾಸ್ ಮತ್ತು ಎಲೆಕ್ಟ್ರಿಷಿಯನ್ ಪ್ರಸಾದ್ ಬಂಧಿತರು. ಇವರ ಪೈಕಿ ಉದುಯಕುಮಾರ್ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ನೆಲೆಸಿದ್ದ. ಇತ್ತೀಚೆಗೆ ಚಿಂತಾಮಣಿ ನಗರದ ಕೋಲಾರ ಕ್ರಾಸ್ ನಲ್ಲಿ ದ್ವಿಚಕ್ರವಾಹನದಲ್ಲಿ ಅನುಮಾನಾಸ್ಪದವಾಗಿ ಹೋಗುತ್ತಿದ್ದ ಮೂವರನ್ನು ಠಾಣೆಯ ಪೊಲೀಸರು ಬಂಧಿಸಿದ್ದರು. ವಿಚಾರಣೆ ನಡೆಸಿದಾಗ ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗುತ್ತಿರುವುದರ ಮಾಹಿತಿ ತಿಳಿದು ಬಂದಿದೆ. ಚಿಂತಾಮಣಿ ನಗರಠಾಣೆಯ ಪಿಎಸ್‌ಐ ಪ್ರಕಾಶ್ ನೇತೃತ್ವದ ತಂಡವು ಕಳ್ಳರಿಂದ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿ ಕೊಂಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net