14ಕ್ಕೆ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಸಂದರ್ಶನ

interview
Published on

ಪೆರ್ಲ: ಉಕ್ಕಿನಡ್ಕದ ಕಾಸರಗೋಡು ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆ.14ರಂದು ಸಂದರ್ಶನ ನಡೆಯಲಿದೆ.

ಜನರಲ್ ಮೆಡಿಸಿನ್, ಪೀಡಿಯಾಟ್ರಿಕ್ಸ್, ಡರ್ಮಟಾಲಜಿ ಮತ್ತು ವೆನೆರಿಯಾಲಜಿ, ಕಮ್ಯುನಿಟಿ ಮೆಡಿಸಿನ್, ಪಲ್ಮನರಿ ಮೆಡಿಸಿನ್, ರೇಡಿಯೊ ಡಯಾಗ್ನೋಸಿಸ್, ಓರಲ್ ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗಗಳಲ್ಲಿ ಖಾಲಿ ಇರುವ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸಂಬಂಧಿತ ವಿಷಯಗಳಲ್ಲಿ ಎಂಡಿ, ಡಿಎನ್ ಬಿ ಅರ್ಹತೆ ಮತ್ತು ಟಿಸಿಎಂಸಿ ನೋಂದಣಿ ಹೊಂದಿರುವ ಅಭ್ಯರ್ಥಿಗಳನ್ನು ಗರಿಷ್ಠ ಒಂದು ವಷರ್ದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುವುದು.

ಅರ್ಹ, ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆ, ಕೆಲಸದ ಅನುಭವ ಸಾಬೀತುಪಡಿಸುವ ಅಗತ್ಯ ಪ್ರಮಾಣಪತ್ರಗಳು ಮತ್ತು ಪ್ರತಿಗಳೊಂದಿಗೆ ಆ.14ರಂದು ಬೆಳಗ್ಗೆ 11ಕ್ಕೆ ಕಾಸರಗೋಡು ಮೆಡಿಕಲ್ ಕಾಲೇಜು ಪ್ರಾಂಶುಪಾಲರ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಯೋಗ್ಯತೆ ಮತ್ತು ಹೆಚ್ಚು ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net