ಹೈದರಾಬಾದಿನ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ ಸಂಸ್ಥೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಂದರ್ಶನ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಕಚೇರಿಯ ಉನ್ನತಿ ಸೌಧದಲ್ಲಿ ಮಂಗಳವಾರ ಜರುಗಿತು.
ಐಎಸ್ಬಿ ಸಂಶೋಧನಾ ಸಂಸ್ಥೆಯ ಸಹ ನಿರ್ದೇಶಕ ಆನಂದ್ ಎಸ್. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜನಜಾಗೃತಿ ವೇದಿಕೆ ರಾಜ್ಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಸ್ ಮಾರ್ಗದರ್ಶನ ನೀಡಿದರು.
ಐಎಸ್ಬಿ ಸಂಸ್ಥೆಯ ಚಂದ್ರಕಲಾ, ಸಿದ್ಧಾರ್ಥ್, ಅರ್ಜುನ್, ಅಖಿಲ್, ಎಂಐಎಸ್ ಯೋಜನಾಧಿಕಾರಿ ಪ್ರೇಮನಾಥ್, ಕೇಂದ್ರ ಕಚೇರಿ ಯೋಜನಾಧಿಕಾರಿಗಳಾದ ನಿಖಿಲೇಶ್ ಮಹೇಶ್, ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ. ಉಪಸ್ಥಿತರಿದ್ದರು.
ಶಿಬಿರದ ಮೂಲಕ ಪಾನಮುಕ್ತರಾದವರ ಕುರಿತು ಸಂಶೋಧನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ ನವಜೀವನ ಸಮಿತಿ ಸದಸ್ಯರ ಹಾಗೂ ಅವರ ಕುಟುಂಬದವರ ಸಂದರ್ಶನವನ್ನು ಐಎಸ್ಬಿ ಸಂಸ್ಥೆ ಅಧಿಕಾರಿಗಳು ನಡೆಸಿ ಮಾಹಿತಿ ಪಡೆದರು.