ಆತ್ಮಾವಲೋಕನ ಸಭೆ ಇಂದು

Published on

ಮದ್ದೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಮತ್ತು ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿದ ಮತದಾರರರಿಗೆ ಹಾಗೂ ಹಗಲಿರುಳು ದುಡಿದ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಲು ಪಟ್ಟಣದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜೂ.15ರಂದು ಬೆಳಗ್ಗೆ 10 ಗಂಟೆಗೆ ಕದಲೂರು ಉದಯ್ ಅಭಿಮಾನಿಗಳ ಬಳಗ ಮತ್ತು ಕಾಂಗ್ರೆಸ್ ಪಕ್ಷದ ವತಿಯಿಂದ ಆತ್ಮಾವಲೋಕನ ಸಭೆ ಕರೆಯಲಾಗಿದೆ. ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು, ಅಭಿಮಾನಿ ಬಳಗದವರು, ಯುವಕ-ಮಿತ್ರರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ ಕೆ.ಎಂ.ಉದಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net