

ರಾಯಚೂರು: ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾೀನ ಕೈದಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಕಾರಾಗೃಹದ ಅಕಾರಿಗಳ ನಿರ್ಲಕ್ಷದಿಂದ ವಿಚಾರಣಾೀನ ಕೈದಿ ರಮೇಶ ಮೃತಪಟ್ಟಿದ್ದು, ತಪ್ಪಿತಸ್ಥ ಅಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಮೇಶ ತಿಮ್ಮಾಪುರ ಎದೆನೋವಿನಿಂದ ಆ.21ರಂದು ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಅಕಾರಿಗಳು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆದರೆ ಆತ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ಆಸ್ಪತ್ರೆಗೆ ಸೇರ್ಪಡೆ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಕುಟುಂಬದವರಿಗೆ ನೀಡಿಲ್ಲ.
ಕಾರಾಗೃಹದಲ್ಲಿದ್ದಾಗ ರಮೇಶನಿಗೆ ಎದೆನೋವು ಕಾಣಿಸಿಕೊಂಡಿದ್ದು ಆ.19ರಂದು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರು ಆಸ್ಪತ್ರೆಗೆ ದಾಖಲಿಸಬೇಕು ಎನ್ನುವ ಸಲಹೆ ನೀಡಿದ್ದರೂ ಅಕಾರಿಗಳು ಆಸ್ಪತ್ರೆಗೆ ದಾಖಲಿಸದೆ ಕಾರಾಗೃಹಕ್ಕೆ ಕರೆದುಕೊಂಡು ಬಂದಿದ್ದಾರೆ.
ಆ.21ರಂದು ಪುನಃ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾನೆ. ವೈದ್ಯರು ಹೇಳಿದಾಗ ಆಸ್ಪತ್ರೆಗೆ ದಾಖಲಿಸಿದ್ದರೆ ರಮೇಶ ಉಳಿಯುತ್ತಿದ್ದ. ಕಾರಣ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಮಿತಿ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್, ಪದಾಕಾರಿಗಳಾದ ಸುರೇಶ ಬಳಗಾನೂರ, ಮಹಾದೇವ ಪರಂಪುರ, ತುರುಮಂದೆಪ್ಪ ಕಟ್ಟಿಮನಿ, ಶಿವಪ್ಪ ಪಲಕನಮರಡಿ, ಬೂದೆಪ್ಪ, ವಿಜಯಕುಮಾರ, ಶಾಂತಪ್ಪ, ರಂಗಪ್ಪ, ಶಿವಪ್ಪ, ರಂಗರಾಜ ಪಾಲ್ಗೊಂಡಿದ್ದರು.