ಸಿಐಡಿ ತಂಡದಿಂದ ಮೈಸೂರಲ್ಲೂ ತನಿಖೆ

crime
Published on

‘ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಲಂಚ ನೀಡುವಂತೆ ತಮ್ಮನ್ನು ಒತ್ತಾಯಿಸಿದರು’ ಎಂಬ ಆರೋಪಿಸಿ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆ ಎನ್ನಲಾದ ಪತ್ರ ಸಂಬಂಧ ಸಿಐಡಿ ಅಧಿಕಾರಿಗಳು ಬುಧವಾರ ಮೈಸೂರಿನಲ್ಲೂ ತನಿಖೆ ನಡೆಸಿದ್ದಾರೆ.

ಸಿಐಡಿ ಐಜಿ ಪ್ರವೀಣ್ ಪವಾರ್ ಮಧುಕರ್ ನೇತೃತ್ವದ ಸಿಐಡಿ ತಂಡ ನಗರದ ಸರಸ್ವತಿಪುರಂನ ಪ್ರಧಾನ ಅಂಚೆ ಕಚೇರಿಗೆ ಭೇಟಿ ನೀಡಿ, ತನಿಖೆ ನಡೆಸಿದ್ದಾರೆ. ಸತತ ಒಂದು ಗಂಟೆಗೂ ಹೆಚ್ಚು ಕಾಲ ಅಂಚೆ ಕಚೇರಿಯ ಸಿಬ್ಬಂದಿಗಳನ್ನು ವಿಚಾರಣೆ ನಡೆಸುವ ಮೂಲಕ ಅಗತ್ಯ ಮಾಹಿತಿ ಪಡೆದಿದ್ದಾರೆ.

ಜುಲೈ 14 ರಂದು ಸರಸ್ವತಿಪುರಂನ ಅಂಚೆ ಇಲಾಖೆ ಕಚೇರಿಯಿಂದ ರಾಜಭವನಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆ ಎನ್ನಲಾದ ಪತ್ರ ಹೋಗಿದೆ ಎನ್ನಲಾಗಿದೆ. ಈ ಸಂಬಂಧ ಸಿಐಡಿ ಅಧಿಕಾರಿಗಳು ಅಗತ್ಯ ಮಾಹಿತಿ ಕಲೆಹಾಕಿದ್ದಾರೆ. ಸಿಐಡಿ ತಂಡ ಜೊತೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಆಗಮಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net