ನಿ.ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ

Published on

ಬಳ್ಳಾರಿ ; ಇಲ್ಲಿನ ವಿಎಸ್‌ಕೆ ವಿವಿಯಲ್ಲಿ ಕಾನೂನು ಬಾಹಿರ ಘಟಿಕೋತ್ಸವ ಪ್ರಮಾಣ ಪತ್ರ ವಿತರಣೆ ಹಾಗೂ ಪ್ರಭಾರಿ ಕುಲಪತಿಯಾಗಿ ಸೇವೆ ಸಲ್ಲಿಸಿದ ಡಾ.ಅನಂತ್ ಎಲ್. ಝಂಡೇಕರ್ ಅವಧಿಯಲ್ಲಿ ಆದೇಶಗಳ ಕುರಿತಂತೆ ನಿ.ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ವಿವಿ ಕುಲಪತಿ ಪ್ರೊ.ಎಂ.ಮುನಿರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಕರಣಗಳ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಈಚೆಗೆ ನಡೆದ ಸಿಂಡಿಕೇಟ್ ಸಭೆಯಲ್ಲಿ ತಿರ್ಮಾನಿಸಲಾಗಿತ್ತು. ಅದರಂತೆ, ನಿವೃತ್ತ ಜಿಲ್ಲಾ ಸತ್ರ ನ್ಯಾಯಾಧೀಶ ಡಿ.ಎಸ್.ಶಿಂಧೆ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಜಾರಿಗೊಳಿಸಲಾಗಿದೆ. ಪ್ರಕರಣದ ಕುರಿತು 45 ದಿನಗಳ ಒಳಗಾಗಿ ತನಿಖೆ ಕೈಗೊಂಡು ವಿವಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ತನಿಖಾ ವರದಿಗಳು ವಿವಿಗೆ ಸಲ್ಲಿಕೆಯಾದ ಬಳಿಕ ತಪ್ಪಿಸ್ಥರ ವಿರುದ್ಧ ಮುಂದಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

==

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net