ಪೋಲಿಸರ ತನಿಖೆಗೆ ಸಹಕಾರ: ಬಿ.ಎಸ್.ಪ್ರಹ್ಲಾದ್ ಹೇಳಿಕೆ

BBMP fire
Published on

ಬೆಂಗಳೂರು: ‘ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯ’ಕಚೇರಿಯಲ್ಲಿ ನಡೆದಿರುವ ಅಗ್ನಿ ದುರಂತ ಪ್ರಕರಣ ಸಂಬಂಧ ಪೋಲಿಸರು ಕೈಗೆತ್ತಿಕೊಂಡಿರುವ ತನಿಖೆಗೆ ಸಹಕಾರ ನೀಡುವುದಾಗಿ ಪಾಲಿಕೆಯ ಪ್ರಧಾನ ಅಭಿಯಂತರ ಬಿ.ಎಸ್.ಪ್ರಹ್ಲಾದ್ ಹೇಳಿದ್ದಾರೆ.

ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸ್ಥಾಪಿತವಾಗಿರುವ ಪ್ರಯೋಗಾಲಯದಲ್ಲಿ ಆಕಸ್ಮಿಕವಾಗಿ ಬೆಂಕಿ ದುರಂತದಿಂದ 9 ಮಂದಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರ್ಘಟನೆ ಬಗ್ಗೆ ತನಿಖೆ ನಡೆಸಬೇಕೆಂದು ಹಲಸೂರು ಪೋಲಿಸ್ ಠಾಣೆಗೆ ಖುದ್ದಾಗಿ ನಾನೇ ದೂರು ನೀಡಿದ್ದೇನೆ. ಪ್ರಕರಣ ಕುರಿತು ಎಲ್ಲ ಮಾಹಿತಿ ಹಾಗೂ ದಾಖಲೆಗಳನ್ನು ನೀಡುವಂತೆ ಪೋಲಿಸರು ಕೋರಿದ್ದಾರೆ. ಅದರಂತೆ, ತನಿಖೆಗೆ ನಮ್ಮ ಸಹಕಾರ ಇರಲಿದೆ ಎಂದರು.

ವಿಕ್ಟೋರಿಯಾ ಆಸ್ಪತ್ರೆ ಅಪಘಾತ ಮತ್ತು ತುರ್ತು ಚಿಕಿತ್ಸಾ ಕೇಂದ್ರ ವಿಭಾಗದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದ್ದು, ಕಾರ್ಯಪಾಲಕ ಅಭಿಯಂತರ ಕಿರಣ್ ಆರೋಗ್ಯದಲ್ಲಿ ಸೋಮವಾರ ಸುಧಾರಣೆ ಕಂಡುಬಂದಿದೆ. ಇದರಿಂದಾಗಿ ಕಾರ್ಯಪಾಲಕ ಅಭಿಯಂತರರಾದ ಸಂತೋಷ್ ಕುಮಾರ್, ವಿಜಯಮಾಲಾ, ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀಧರ್, ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಕನ್ಸಲ್ಟೆಂಟ್ ಶ್ರೀನಿವಾಸ್, ಗಣಕಯಂತ್ರ ನಿರ್ವಾಹಕ ಮನೋಜ್ ಹಾಗೂ ಪ್ರಥಮ ದರ್ಜೆ ಸಹಾಯಕ ಸಿರಾಜ್ ಸೇರಿ ಒಟ್ಟು 7 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಖ್ಯ ಅಭಿಯಂತರ ಶಿವಕುಮಾರ್, ಆಪರೇಟರ್ ಜ್ಯೋತಿಗೆ ವಿಶೇಷ ಚಿಕಿತ್ಸೆ ಮುಂದುವರಿಸಿದೆ. ಮುಂದಿನ 24 ಗಂಟೆ ಕಾಲ ಇವರಿಬ್ಬರ ಮೇಲೆ ವೈದ್ಯರು ನಿಗಾವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net