ತನಿಖಾ ದಳ ಕಾರ್ಯಾಚರಣೆ, ನಿಯಮ ಉಲ್ಲಂಘಿಸಿದವರಿಗೆ ರಸ್ತೆಯಲ್ಲಿಯೇ ದಂಡ

IMG_20251010_232511.jpg
Published on

ಚಿಕ್ಕಬಳ್ಳಾಪುರ: ನಗರದ ವಿವಿಧೆಡೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ತಾಲೂಕು ತನಿಖಾ ದಳ ಕಾರ್ಯಾಚರಣೆ ಕೈಗೊಂಡು ಕೋಟ್ಪಾ‌ ಕಾಯ್ದೆ ಉಲ್ಲಂಘಿಸಿದವರಿಗೆ ದಂಡವನ್ನು ವಿಧಿಸಿತು. ಇದೇ ವೇಳೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ತನಿಖಾ ದಳಗಳನ್ನೊಳಗೊಂಡ ತಂಡವು, ಚಿಕ್ಕಬಳ್ಳಾಪುರ ನಗರದ ಬಾಲಾಜಿ ಚಿತ್ರಮಂದಿರ ಹಾಗೂ ಗೋಲ್ಡನ್ ಗ್ಲೀಮ್ಸ್ ಕಾಲೇಜು ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡಿತು. ನಿಯಮ ಮೀರಿ ತಂಬಾಕು ಪದಾರ್ಥಗಳನ್ನು ಮಾರುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಜಾಗೃತಿ ಮೂಡಿಸಲಾಯಿತು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನರಸಿಂಹಯ್ಯ ಮಾತನಾಡಿ, ನಿಯಮ‌ಬಾಹಿರವಾಗಿ ತಂಬಾಕು ಪದಾರ್ಥಗಳ‌ನ್ನು ಮಾರುತ್ತಿದ್ದ ಅಂಗಡಿ‌ ಮಾಲೀಕರಿಗೆ ಮೊದಲು ದಂಡ ವಿಧಿಸುವ ಜೊತೆಗೆ ಎಚ್ಚರಿಕೆ ನೀಡಲಾಗಿದೆ. ಮುಂಬರುವ ದಿನಗಳಲ್ಲೂ ಇದೇ ಧೋರಣೆಯನ್ನು ಮುಂದುವರೆಸಿದರೆ ಪರವಾನಗಿ ರದ್ದತಿಯ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ‌ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದ್ದು ನಿಯಮವನ್ನು ಯಾರೂ ಸಹ ಉಲ್ಲಂಘಿಸಬಾರದು ಎಂದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನಾರಾಯಣಸ್ವಾಮಿ, ಪ್ರಿಯಾ ಮತ್ತು ಸಾಮಾಜಿಕ  ಕಾರ್ಯಕರ್ತ ಮಂಜುನಾಥ್‌ ಮತ್ತಿತರರು ಇದ್ದರು.

*೧೯ ಪ್ರಕರಣಗಳ ದಾಖಲು
ಹೋಟೆಲ್, ಕಾಂಡಿಮೆಂಟ್ಸ್‌, ಬೇಕರಿ, ಇತರೆ ಅಂಗಡಿಗಳಲ್ಲಿ ಧೂಮಪಾನ ನಿಷೇಧಿತ ನಾಮಫಲಕವನ್ನು ಅಳವಡಿಸಿಕೊಳ್ಳದಿರುವುದು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಪತ್ತೆ ಪ್ರಕರಣ ಸೇರಿದಂತೆ 19 ಪ್ರಕರಣಗಳನ್ನು ದಾಖಲಿಸಿ, 5,500 ರೂ ದಂಡವನ್ನು ಸಂಗ್ರಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net